ಬಿಟ್ ಕಾಯಿನ್ ಪ್ರಕರಣ – ತನಿಖೆಗೆ ಹಾಜರಾಗದೇ ಶ್ರೀಕಿ ಕಳ್ಳಾಟ

Public TV
1 Min Read

ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ (BitCoin Case) ಸಿಸಿಬಿ  (CCB) ವಿರುದ್ಧದ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಶ್ರೀಕಿ ಸಿಐಡಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.

ಶ್ರೀಕಿ ವಿಚಾರಣೆಗೆ ಹಾಜರಾಗದೇ ಕಳ್ಳಾಟ ಆಡುತ್ತಿದ್ದಾನೆ. ಐದಾರು ಬಾರಿ ನೋಟಿಸ್ ನೀಡಿದರೂ ಸಹ ಆತ ವಿಚಾರಣೆಗೆ ಹಾಜರಾಗುತ್ತಿಲ್ಲ. ಪ್ರತಿ ಬಾರಿ ಒಂದೊಂದು ಕಾರಣ ನೀಡುತ್ತಿರುವ ಆತ, ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ ಹಾಗೂ ನನಗೆ ಹುಷಾರಿಲ್ಲ ಎಂಬ ಕಾರಣ ನೀಡಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾನೆ. ಇದನ್ನೂ ಓದಿ: ನಾಯಿ ಕಚ್ಚಿದ ಕೇಸ್‌ – ನಟ ದರ್ಶನ್‌ಗೆ ಕ್ಲೀನ್‌ ಚಿಟ್‌, ಶೀಘ್ರವೇ ಚಾರ್ಜ್‌ಶೀಟ್‌

ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಆತ ಊಟ, ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಮಲಗಲು ಮನೆಗೆ ತೆರಳುತ್ತಿದ್ದ. ವಿಚಾರಣೆ ನಡೆಸಲು ನಿಮ್ಹಾನ್ಸ್‌ಗೆ  ಹೋದ ಎಸ್‍ಐಟಿ ತಂಡಕ್ಕೆ ಡೆತ್‍ನೋಟ್ ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಸಹ ಹಾಕಿದ್ದ. ಈ ರೀತಿ ಶ್ರೀಕಿ ನಡೆದುಕೊಳ್ಳುವುದರಿಂದ ತನಿಖೆಯಲ್ಲಿ ಹಿನ್ನಡೆ ಆಗುತ್ತಿದೆ.

ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿತ್ತು. ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ. ಇದನ್ನೂ ಓದಿ: ಕೆರೆಯ ಮಣ್ಣು ಅಕ್ರಮ ಸಾಗಾಟ – ಗ್ರಾಮಸ್ಥರಿಂದ 50ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಆಕ್ರೋಶ

Share This Article