ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಿಐಡಿಗೆ ಹಸ್ತಾಂತರ

Public TV
1 Min Read

ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದ ಮಹಿಳೆಯೊಬ್ಬರನ್ನು (Woman) ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಬೆಂಗಳೂರಿನ ಸಿಐಡಿ (Woman) ಕಚೇರಿಗೆ ತೆರಳಿ ಕೇಸ್‍ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಅವರಿಗೆ ಹಸ್ತಾಂತರಿಸಲಾಗಿದೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರು ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆ ಭೇಟಿ ನಿಷೇಧಿಸಿದ ಹೈಕೋರ್ಟ್

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದೆ. ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸೋಮವಾರ ಬೆಳಗಾವಿಗೆ ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ. ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಪ್ರಕರಣ ನಡೆದ ಬಳಿಕ ಘಟನಾ ಸ್ಥಳಕ್ಕೆ ಹೋಗಲು ತಡ ಮಾಡಿದ್ದ ಕಾಕತಿ ಸಿಪಿಐ ವಿಜಯ್ ಸಿನ್ನೂರ್ ಅವರನ್ನ ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ

Share This Article