ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

Public TV
1 Min Read

ಪಾಟ್ನಾ: ಹಿಂದೂಗಳು ಹಲಾಲ್ ಮಾಂಸವನ್ನು (Halal Meat) ತಿನ್ನುವುದನ್ನು ಬಿಟ್ಟುಬಿಡಬೇಕು ಮತ್ತು ಒಂದೇ ಏಟಿಗೆ ಕೊಲ್ಲಲ್ಪಡುವ ಪ್ರಾಣಿಗಳ ಮಾಂಸವಾದ ‘ಝಟ್ಕಾ’ವನ್ನು (Jhatka) ಮಾತ್ರ ಸೇವಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ (Giriraj Singh) ಭಾನುವಾರ ಹೇಳಿದ್ದಾರೆ.

ಬಿಜೆಪಿಯ ಹಿರಿಯ ನಾಯಕರಾದ ಸಿಂಗ್ ತಮ್ಮ ಬೇಗುಸರಾಯ್ ಸಂಸದೀಯ ಕ್ಷೇತ್ರದಲ್ಲಿ ಜನರಲ್ಲಿ ಈ ಮನವಿ ಮಾಡಿದ್ದಾರೆ. ತಮ್ಮ ಹಿಂದೂ ಬೆಂಬಲಿಗರು ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ಧರ್ಮವನ್ನು ಹಾಳು ಮಾಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಮಾಡಿದ್ದಾರೆ.

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಈಗ ಹಿಂದೂಗಳು ಕೂಡಾ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಅವರು ಕರೆ ನೀಡಿದರು. ಇದನ್ನೂ ಓದಿ: ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ

ಹಿಂದೂಗಳು ಪ್ರಾಣಿ ವಧೆ ಮಾಡುವ ವಿಧಾನವೆಂದರೆ ಝಟ್ಕಾ. ಹಿಂದೂಗಳು ಪ್ರಾಣಿ ಬಲಿ ಮಾಡಿದಾಗಲೆಲ್ಲಾ ಅವರು ಒಂದೇ ಹೊಡೆತದಲ್ಲಿ ಮಾಡುತ್ತಾರೆ. ಹೀಗಾಗಿ ಅವರು ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮನ್ನು ತಾವು ಭ್ರಷ್ಟಗೊಳಿಸಬಾರದು. ಅವರು ಯಾವಾಗಲೂ ಜಟ್ಕಾಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಕೆಲವು ವಾರಗಳ ಹಿಂದೆ ಸಿಂಗ್ ಅವರು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ಸ್ಫೂರ್ತಿ ಪಡೆದು ಹಲಾಲ್ ಎಂದು ಲೇಬಲ್ ಮಾಡಿದ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

Share This Article