ಮುಂಬೈನಲ್ಲಿ ಲ್ಯಾಂಡ್‌ ಆಯ್ತು ಫ್ರಾನ್ಸ್‌ ವಶದಲ್ಲಿದ್ದ 303 ಭಾರತೀಯರಿದ್ದ ವಿಮಾನ

Public TV
1 Min Read

ಮುಂಬೈ: ಶಂಕಿತ ಮಾನವ ಕಳ್ಳಸಾಗಣೆ ಆರೋಪದ ಮೇಲೆ ಫ್ರಾನ್ಸ್‌ (France) ವಶದಲ್ಲಿದ್ದ 303 ಭಾರತೀಯ ಪ್ರಯಾಣಿಕರಿದ್ದ A-340 ವಿಮಾನವು ಮಂಗಳವಾರ ಮುಂಜಾನೆ ಮುಂಬೈಗೆ ಬಂದಿಳಿಯಿತು.

ವಿಮಾನವು ದುಬೈನಿಂದ ನಿಕರಾಗುವಾಗೆ ಹೋಗುತ್ತಿತ್ತು. ಆದರೆ ಕಳೆದ ವಾರ ಫ್ರಾನ್ಸ್‌ನ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಮಾನವ ಕಳ್ಳಸಾಗಾಣಿಕೆ ಶಂಕೆ – ಫ್ರಾನ್ಸ್‌ನಲ್ಲಿ 300 ಕ್ಕೂ ಹೆಚ್ಚು ಭಾರತೀಯರಿದ್ದ ವಿಮಾನ ವಶಕ್ಕೆ

ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಭಾರತೀಯ ಪ್ರಯಾಣಿಕರಿಗೆ ನೀಡಿದ ಆತಿಥ್ಯ ಮತ್ತು ಯಾವುದೇ ತೊಂದರೆಯಾಗದಂತೆ ಮನೆಗೆ ಹಿಂತಿರುಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಫ್ರೆಂಚ್ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದೆ.

ರಾಯಭಾರ ಕಚೇರಿ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದು ಮತ್ತು ನಾಗರಿಕರ ಸುರಕ್ಷಿತ ವಾಪಸ್‌ ಆಗಲು ಫ್ರೆಂಚ್ ಅಧಿಕಾರಿಗಳು ನೀಡಿದ ಸಹಕಾರವನ್ನು ರಾಯಭಾರ ಕಚೇರಿ ಶ್ಲಾಘಿಸಿದೆ. ಇದನ್ನೂ ಓದಿ: ಪಾಕ್‍ನಲ್ಲಿ 2024ರ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಹಿಂದೂ ಯುವತಿ

ಭಾರತೀಯ ಪ್ರಯಾಣಿಕರು ವಾಪಸ್‌ ಆಗಲು ಉತ್ತಮ ಆತಿಥ್ಯದೊಂದಿಗೆ ಸಹಕರಿಸಿದ ಫ್ರೆಂಚ್‌ ಸರ್ಕಾರ ಮತ್ತು ವಾಟ್ರಿ ವಿಮಾನ ನಿಲ್ದಾಣಕ್ಕೆ ಧನ್ಯವಾದಗಳು. ರಾಯಭಾರ ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಕ್ಕಾಗಿ, ಪ್ರಯಾಣಿಕರ ಯೋಗಕ್ಷೇಮ ನೋಡಿಕೊಂಡಿದ್ದಕ್ಕಾಗಿ ಕೃತಜ್ಞತೆಗಳು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದೆ.

ಮಾನವ ಕಳ್ಳಸಾಗಣೆ ಶಂಕೆಯಲ್ಲಿ ನಿಕರಾಗುವಾಗೆ ತೆರಳುತ್ತಿದ್ದ ವಿಮಾನವನ್ನು ಫ್ರಾನ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂತರ ವಿಮಾನ ಪ್ರಯಾಣವನ್ನು ಪುನರಾರಂಭಿಸಲು ಅನುಮತಿ ನೀಡಿದ್ದರು.

Share This Article