ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸ್ತಿದ್ದ ಕಾರು ಅಪಘಾತ

Public TV
1 Min Read

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಪ್ರಯಾಣಿಸುತ್ತಿದ್ದ ಕಾರು ಅಪಘಾತ (Car Accident) ಸಂಭವಿಸಿದ ಘಟನೆ ನಡೆದಿದೆ.

ತುಮಕೂರಿನ (Tumakuru) ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ (Shivamogga- Bellary) ಹೋಗುವಾವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

ಈ ಸಂಬಂಧ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article