ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

Public TV
1 Min Read

ನವದೆಹಲಿ: ಜಮ್ಮು ಕಾಶ್ಮೀರದ (Jammu Kashmir) ತೆಹ್ರೀಕ್-ಎ-ಹುರಿಯತ್ (Tehreek-e-Hurriyat)  ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಈ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿ ಕಾನೂನುಬಾಹಿರ ಸಂಘಟನೆ ಎಂದು ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ಅಮಿತ್‌ ಶಾ ಅವರು,ತೆಹ್ರೀಕ್-ಎ-ಹುರಿಯತ್ ಸಂಘಟನೆ ಭಾರತದಿಂದ ಜಮ್ಮು ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಿ, ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

ಪ್ರಧಾನಿ ನರೇಂದ್ರಮೋದಿ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ-ಸಹಿಷ್ಣು ನೀತಿಯನ್ನು ಪಾಲಿಸುತ್ತಿದ್ದಾರೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಯುತ್ತೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

ಭಾನುವಾರ ಗೃಹ ಸಚಿವಾಲಯದ ಗೆಜೆಟೆಡ್ ಅಧಿಸೂಚನೆಯಲ್ಲಿ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನ ಮತ್ತು ವಿವಿಧ ಇತರ ಮೂಲಗಳಿಂದ ಹಣವನ್ನು ತೆಹ್ರೀಕ್-ಎ-ಹುರಿಯತ್ ಸಂಘಟನೆಯ ನಾಯಕರು ಮತ್ತು ಸದಸ್ಯರು ತೊಡಗಿಸಿಕೊಂಡಿದ್ದಾರೆ. ಈ ಸಂಘಟನೆಯ ಸದಸ್ಯರು ಸಾಂವಿಧಾನಿಕ ಸ್ಥಾಪನೆಗೆ ಸಂಪೂರ್ಣ ಅಗೌರವವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ (Syed Ali Shah Geelani)ಅವರು ಆಗಸ್ಟ್‌ 07, 2004ರಂದು ತೆಹ್ರೀಕ್-ಎ-ಹುರಿಯತ್ ಸಂಘಟನೆ ಸ್ಥಾಪಿಸಿದ್ದರು.

Share This Article