ಬಸ್, ಟ್ರಕ್ ನಡುವೆ ಅಪಘಾತ – 12 ಮಂದಿ ದುರ್ಮರಣ

Public TV
1 Min Read

ದಿಸ್ಪುರ್: ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 12 ಮಂದಿ ಸಾವಿಗೀಡಾದ ಘಟನೆ ಅಸ್ಸಾಂನ (Assam) ಗೋಲಾಘಾಟ್‍ನಲ್ಲಿ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇಂದು (ಬುಧವಾರ) ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ತಿಲಿಂಗ ಮಂದಿರದ ಕಡೆಗೆ ಹೊರಟಿತ್ತು. ಈ ವೇಳೆ ಬಲಿಜನ್ ಪ್ರದೇಶದ ಬಳಿ ಬಸ್ ಟ್ರಕ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ – 20 ಜನರ ವಿರುದ್ಧ ದೂರು

ಘಟನೆಯ ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸರು (Police ) ತಿಳಿಸಿದ್ದಾರೆ.

ಘಟನೆಯ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಸತ್ತೇ ಹೋದೆ ಅಂದ್ಕೊಂಡೆ – ಅವಘಡಕ್ಕೀಡಾದ ವಿಮಾನದೊಳಗಿದ್ದ ಪ್ರಯಾಣಿಕ

Share This Article