ಪ್ರತಾಪ್ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ದೊಡ್ಮನೆಗೆ ಪೊಲೀಸ್ ಎಂಟ್ರಿ

Public TV
3 Min Read

ಡ್ರೋನ್ ಪ್ರತಾಪ್ (Drone Pratap) ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಪೊಲೀಸರು ಕೂಡ ವಿಚಾರಣೆಗೆ ಮುಂದಾಗಿದ್ದಾರೆ. ಆಹಾರದಲ್ಲಿ ವ್ಯತ್ಯಾಸವಾದ ಪರಿಣಾಮ ಪ್ರದೀಪ್ ಸಂಜೀವಿನಿ ಆಸ್ಪತ್ರೆಗೆ (Police) ದಾಖಲಾಗಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಕುಂಬಳಗೋಡು ಪೊಲೀಸ್ ಠಾಣಾ ಅಧಿಕಾರಿ ಶಿವಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರತಾಪ್ ಗೆ ಚಿಕಿತ್ಸೆ ಕೊಟ್ಟ ವೈದ್ಯರ ಜೊತೆ ಚರ್ಚೆ ಮಾಡಿ, ಆರೋಗ್ಯದ ಬಗ್ಗೆ ಮಾಹಿತಿ ತಗೆದುಕೊಂಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸೀದಾ ಬಿಗ್ ಬಾಸ್ ಮನೆಯತ್ತ ತೆರಳಿರುವ ಪೊಲೀಸ್ ಅಧಿಕಾರಿಗಳು ಅಲ್ಲಿಯೂ ಡ್ರೋನ್ ಪ್ರತಾಪ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರಂತೆ. ಪೊಲೀಸರು ಈ ಪ್ರಕರಣದಲ್ಲಿ ಪ್ರವೇಶ ಮಾಡಿರುವುದು ನಾನಾ ರೀತಿಯ ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಆದರೆ, ಪ್ರತಾಪ್ ಅವರ ಆರೋಗ್ಯ ಸುಧಾರಿಸಿದ್ದು, ಮತ್ತೆ ಅವರು ಬಿಗ್ ಬಾಸ್ ಮನೆಯೊಳಗೆ ಮರು ಪ್ರವೇಶ ಮಾಡಿದ್ದಾರೆ ಎನ್ನುವ ಮಾಹಿತಿಯೂ ಇದೆ.

ಆತಂಕದಲ್ಲಿ ಫ್ಯಾನ್ಸ್

ಬಿಗ್ ಬಾಸ್ (Bigg Boss Kannada) ಮನೆಯ ಸ್ಟ್ರಾಂಗ್ ಕಂಟೆಸ್ಟೆಂಟ್ ಡ್ರೋನ್ ಪ್ರತಾಪ್ ಮತ್ತೊಂದು ಸಾರಿ ಆಸ್ಪತ್ರೆ ಪಾಲಾಗಿದ್ದಾರೆ. ಕಳೆದ ಬಾರಿ ಕೆಮಿಕಲ್ ಮಿಶ್ರಿತ ನೀರು ಕಣ್ಣಿಗೆ ಬಿದ್ದ ಕಾರಣಕ್ಕೆ ಆಸ್ಪತ್ರೆ ಸೇರಿದ್ದರು. ಈ ಬಾರಿ ಡ್ರೋನ್ ಖಿನ್ನತೆಗೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ. ಖಿನ್ನತೆಯ ಕಾರಣದಿಂದಾಗಿ ಎರಡು ದಿನದಿಂದ ಡ್ರೋನ್ ಸರಿಯಾಗಿ ಊಟ ಮಾಡಿರಲಿಲ್ಲ ಎನ್ನುವ ಮಾಹಿತಿ ಸಿಗುತ್ತಿದೆ. ಅದಕ್ಕಾಗಿ ಅವರಿಗೆ ವಿಟ್ಯಾಮಿನ್ ಮಾತ್ರೆ ನೀಡಲಾಗುತ್ತು ಎನ್ನುವ ಸುದ್ದಿಯೂ ಹರಿದಾಡುತ್ತಿದೆ.

ಬಿಗ್ ಬಾಸ್ ಮನೆಗೆ ಡ್ರೋನ್ ಅವರ ತಂದೆ ತಾಯಿ ಬಂದಾಗ ಸಖತ್ ಸಂಭ್ರಮಿಸಿದ್ದರು ಪ್ರತಾಪ್. ಅಪ್ಪ ಅಮ್ಮನ ಅಪ್ಪುಗೆಯಲ್ಲಿ ಕಳೆದು ಹೋಗಿದ್ದರು. ಹಲವು ವರ್ಷಗಳ ಮುನಿಸು ಮಾಯವಾಗಿತ್ತು. ಇಡೀ ದಿನ ತನ್ನ ತಂದೆ ತಾಯಿಯ ಜೊತೆ ಹಲವಾರು ವಿಚಾರಗಳನ್ನು ಹಂಚಿಕೊಂಡು ಮತ್ತೆ ಎಲ್ಲರೂ ಒಟ್ಟಿಗೆ ಬದುಕುವ ಭರವಸೆ ನೀಡಿದ್ದರು. ಆದರೆ, ಕೆಲವು ದಿನಗಳಿಂದ ಡ್ರೋನ್ ಖಿನ್ನತೆಗೆ ಜಾರಿದ್ದರು ಎಂದು ಹೇಳಲಾಗುತ್ತಿದೆ. ಮತ್ತೆ ಕುಟುಂಬದೊಂದಿಗೆ ನೀನು ಬದುಕಿದರೆ, ದೋಷವಿದೆ ಎಂದು ಜ್ಯೋತಿಷ್ಯರು ಹೇಳಿದ ಕಾರಣಕ್ಕಾಗಿ ಅವರು ನೊಂದುಕೊಂಡಿದ್ದರು ಎನ್ನಲಾಗುತ್ತಿದೆ.  ಅವತ್ತಿನಿಂದ ಡ್ರೋನ್ ಸರಿಯಾಗಿ ಊಟ, ತಿಂಡಿ  ಮಾಡದೇ ಅದೇ ಗುಂಗಿನಲ್ಲಿ ಇದ್ದರು ಎನ್ನುವುದು ಹರಿದಾಡುತ್ತಿರುವ ವರ್ತಮಾನ.

ಖಿನ್ನತೆ ಕಾರಣವು ಒಂದು ಕಡೆಯಾದರೆ, ಮತ್ತೊಂದು ಕಡೆ ಅವರಿಗೆ ಊಟದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನುವ ಮಾತೂ ಕೇಳಿ ಬಂದಿದೆ. ಇನ್ನೂ ಕೆಲವರು ಬಿಗ್ ಬಾಸ್ ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗಲಿರಬಹುದಾ ಎನ್ನುವ ಪ್ರಶ್ನೆಯನ್ನೂ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಗೆ ಸೋಷಿಯಲ್ ಮೀಡಿಯಾ ಮೂಲಕ ಕೇಳುತ್ತಿದ್ದಾರೆ.

ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆಯ ಅಪ್ ಡೇಟ್ ನೀಡುವಂತಹ ಮತ್ತು ಅದರಲ್ಲಿ ಬಹುತೇಕ ವಿಷಯಗಳು ನಿಜವೂ ಆಗಿರುವಂತಹ ಬಿಬಿಕೆ ಅಪ್ ಡೇಟ್ ಸೋಷಿಯಲ್ ಮೀಡಿಯಾ ಬರೆದುಕೊಂಡಂತೆ ಮತ್ತೆ ಬಿಗ್ ಬಾಸ್ ಮನೆಗೆ ಪ್ರತಾಪ್ ಬರೋದು ಅನುಮಾನ ಎಂದು ಪೋಸ್ಟ್ ಮಾಡಲಾಗಿದೆ. ಹಾಗಾಗಿ ಡ್ರೋನ್ ಅವರಿಗೆ ಏನಾಗಿದೆ ಎನ್ನುವ ಆತಂಕ ಎಲ್ಲರದ್ದು.

Share This Article