ಕರಸೇವಕರ ಮೇಲೆ ಪ್ರಕರಣಗಳು ಬಾಕಿ ಇವೆ ಎಂದ ಸಿಎಂನ್ನು ಶ್ರೀರಾಮ ಕ್ಷಮಿಸಲ್ಲ: ಅಶೋಕ್ ಕಿಡಿ

Public TV
2 Min Read

– ರಾಜೀನಾಮೆ ಕೊಟ್ಟು, ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡುವಂತೆ ಒತ್ತಾಯ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಹಸಿ ಸುಳ್ಳು ಹೇಳಿದಿರಲ್ಲ ಸಿಎಂ ಸಿದ್ದರಾಮಯ್ಯ (Siddaramaiah) ಅವರೇ, ಆ ಪ್ರಭು ಶ್ರೀರಾಮನು ನಿಮ್ಮನ್ನ ಎಂದಿಗೂ ಕ್ಷಮಿಸಲಾರ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಆರ್.ಅಶೋಕ್ (R.Ashok) ಟ್ವೀಟ್‍ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಶ್ರೀಕಾಂತ್ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯಕಂಡಿವೆ. ಬಾಕಿ ಇರುವ ಒಂದು ಪ್ರಕರಣ ಸಹ 1992ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್ ಶಾಕ್ – ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ

ಈಗ ಉಳಿದಿರುವುದು ಎರಡು ಸಾಧ್ಯತೆಗಳು ಮಾತ್ರ, ಒಂದು ತಮಗೆ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈತಪ್ಪಿ, ಕಾಣದ ಕೈಗಳು ತಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಎರಡನೆಯದಾಗಿ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಿದ್ದೀರಿ. ಇವೆರಡರಲ್ಲಿ ಯಾವುದು ಸತ್ಯವಾದರೂ ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ಈ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಿ ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮ ಮಂದಿರ ರಕ್ಷಣೆಗೆ ಉಡುಪಿಯ ಟೆಲಿಸ್ಕೋಪ್!

Share This Article