ಅಟ್ಟಾಡಿಸಿ ಮಾರಕಾಸ್ತ್ರಗಳಿಂದ 25 ಬಾರಿ ಇರಿದು ವ್ಯಕ್ತಿಯ ಹತ್ಯೆ

Public TV
1 Min Read

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ (Murder) ಘಟನೆ ರಾಜ್ಯದ ಗಡಿಭಾಗದ ತಮಿಳುನಾಡಿನ (Tamil Nadu) ಸಿಪ್ಕಾಟ್ ಬಳಿಯ ಬೇಗಿಪಲ್ಲಿಯಲ್ಲಿ ನಡೆದಿದೆ.

ಬೇಗಿಪಲ್ಲಿಯ ನಿವಾಸಿ ತಿಮ್ಮರಾಜು (36) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋದ ವೇಳೆ ತಪ್ಪಿಸಿಕೊಳ್ಳಲು ಹೋಟೆಲ್ ಒಂದರ ಒಳಗೆ ಹೋಗಿದ್ದಾನೆ. ದುಷ್ಕರ್ಮಿಗಳು ಆದರೂ ಆತನನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ 25 ಬಾರಿ ಚುಚ್ಚಿದ್ದಾರೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇದನ್ನೂ ಓದಿ: ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ ಲೀಕ್ ಮಾಡ್ತೀನಿ: ಸುಕೇಶ್ ಬೆದರಿಕೆ

ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಿಮ್ಮರಾಜು ಹತ್ಯೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸ್ಥಳಕ್ಕೆ ಸಿಪ್ಕಾಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಸಿಪ್ಕಾಟ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿದ ಬಸ್ – ಓರ್ವ ಸಾವು, 25 ಮಂದಿ ಗಂಭೀರ

Share This Article