ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಓರ್ವ ಸಾವು, ಐವರು ಗಂಭೀರ

By
1 Min Read

ಬಳ್ಳಾರಿ: ಬಿಸ್ಕೆಟ್ ಫ್ಯಾಕ್ಟರಿಯಲ್ಲಿ (Biscuit Factory) ಬಾಯ್ಲರ್ (Boiler) ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ (Ballari) ನಡೆದಿದೆ.

ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಸಲೀಂ ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ್ದ ಮಹಿಳೆಗೆ ಒಂದು ರಾತ್ರಿ ಜೊತೆಗೆ ಕಳೆಯುವಂತೆ ಪೇದೆ ಒತ್ತಡ- ಆರೋಪ

ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ನಗರದ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಬಾಯ್ಲರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾಲಿಗೆ ಬಿದ್ದು ಬೇಡಿಕೊಂಡರೂ ಬಿಡದೇ ಅತ್ಯಾಚಾರ ಮಾಡಿದ್ರು – ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ

Share This Article