ಯುವ ಪ್ರತಿಭೆ ವಿನಯ್- ದಿಶಾ ರಮೇಶ್ ನಟನೆಯ ‘ದಿ’ ಸಿನಿಮಾದ ಸಾಂಗ್‌ ಔಟ್

By
2 Min Read

ನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ವಿಭಿನ್ನ ಬಗೆಯ ಕಥಾಹಂದರ ಸಿನಿಮಾ ಮೂಲಕ ಯುವ ಸಿನಿಮೋತ್ಸಾಹಿಗಳು ಪ್ರೇಕ್ಷಕರ ಎದುರು ಹಾಜರಾಗುತ್ತಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾ ದಿ.‌ ಇದನ್ನೂ ಓದಿ:ಬಾಲಿವುಡ್‌ಗೆ ಕಾಲಿಟ್ಟ ಕೀರ್ತಿ ಸುರೇಶ್- ವರುಣ್‌ಗೆ ‘ಮಹಾನಟಿ’ ನಾಯಕಿ

‘ದಿ’ ಸಿನಿಮಾ (Dee Film) ಮೂಲಕ ವಿನಯ್ (Vinay) ನಾಯಕನಾಗಿ ಹಾಗೂ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಒಂದಷ್ಟು ವರ್ಷಗಳ ಅನುಭವವಿರುವ ಅವರೀಗ ‘ದಿ’ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೆಜ್ಜೆ ಇಟ್ಟಿದ್ದಾರೆ. ಈ ಚಿತ್ರದ ‘ನಾನು ಮೌನಿ’ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ. ಕವಿರಾಜ್ ಸಾಹಿತ್ಯದ ಈ ಹಾಡಿಗೆ ಸಾಯಿ ವಿಘ್ನೇಶ್ ಧ್ವನಿಯಾಗಿದ್ದು, ಯುಎಂ ಸ್ಟೀವನ್ ಸತೀಶ್ ಸಂಗೀತ ಒದಗಿಸಿದ್ದಾರೆ. ನಾನು ಮೌನಿ ಅಂತಾ ವಿನಯ್- ದಿಶಾ ರಮೇಶ್ (Disha Ramesh) ಹಾಡಿನಲ್ಲಿ ಮಿಂಚಿದ್ದಾರೆ. ಇದನ್ನೂ ಓದಿ:ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ದುನಿಯಾ ವಿಜಯ್ ವಿಶೇಷ ಮನವಿ

ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ದಿ ಚಿತ್ರ ಡಾಲರ್ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

 

View this post on Instagram

 

A post shared by Disha Ramesh (@disha.ramesh)

‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ ‘ದಿ’ ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್‌ ಮಾಡಿದ್ದು, ಯುಎಂ ಸ್ಟೀವನ್ ಸತೀಶ್ ಅವರು ಸಂಗೀತ ನಿರ್ದೇಶನ, ಕವಿರಾಜ್ – ವಿನಯ್ ಸಾಹಿತ್ಯ ಬರೆದಿದ್ದಾರೆ. ಚಿತ್ರಕ್ಕೆ ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಮಾಡಿದ್ದಾರೆ.

‘ದಿ’ ಸಿನಿಮಾಗೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಿಂಪಲ್ ಸುನಿ (Simple Suni) ಈ ಹಿಂದೆ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದ್ದರು. ಸದ್ಯದಲ್ಲೇ ರಿಲೀಸ್‌ ಬಗ್ಗೆ ಚಿತ್ರತಂಡ ಅಪ್‌ಡೇಟ್‌ ನೀಡಲಿದೆ.

Share This Article