ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ದಿನಾಂಕ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಪರಮೇಶ್ವರ್

Public TV
1 Min Read

ಬೆಂಗಳೂರು: ಮುದ್ದಹನುಮೇಗೌಡ (Muddahanumegowda) ಕಾಂಗ್ರೆಸ್ ಸೇರ್ಪಡೆ ದಿನಾಂಕವನ್ನು ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ತೀರ್ಮಾನ ಮಾಡ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ತಿ (G.Parameshwar) ಳಿಸಿದರು.

ಮುದ್ದಹನುಮೇಗೌಡ ಕಾಂಗ್ರೆಸ್ (Congress) ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ಮಾಡಿಕೊಳ್ಳೋದು ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ಹೈಕಮಾಂಡ್ ಅವರು ತೀರ್ಮಾನ ಮಾಡ್ತಾರೆ. ಅವರು ಕಾಂಗ್ರೆಸ್ ‌ಸೇರ್ಪಡೆಗೆ ಸಮಯ ನಿಗದಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷರು ಅ ಬಗ್ಗೆ ನಿರ್ಧಾರ ಮಾಡ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ‌ಜಿ. ಪರಮೇಶ್ವರ್

ಮುದ್ದಹನುಮೇಗೌಡರಿಗೆ ಪರವೂ ಇದೆ, ವಿರೋಧವೂ ಇದೆ. ಅಂತಿಮವಾಗಿ ಅಧ್ಯಕ್ಷರು, ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತೋ ಅದು ಆಗುತ್ತೆ. ನಾಲ್ಕು ಜನ ವಿರೋಧ ಮಾಡ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಜನವರಿ 19ರ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರದೇಶ್ ಎಲೆಕ್ಷನ್ ಕಮಿಟಿ ಸಭೆ ಅದು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಅಬ್ಸರ್ವರ್ಸ್‌ ಹೆಸರು ತರುತ್ತಾರೆ. ಆ ಹೆಸರುಗಳನ್ನ ಆ ಸಮಿತಿಯಲ್ಲಿ ಇಟ್ಟು ಅದರ ಬಗ್ಗೆ ಚರ್ಚೆ ಮಾಡ್ತಾರೆ. ಚರ್ಚೆ ಬಳಿಕ ಅಭ್ಯರ್ಥಿಗಳ ಪಟ್ಟಿ ಮಾಡಿ ಕೇಂದ್ರ ಸಮಿತಿಗೆ ಕಳಿಸ್ತಾರೆ. ಸ್ಕ್ರೀನಿಂಗ್ ಕಮಿಟಿ ಮುಂದೆ ಇಡ್ತಾರೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ಬಗ್ಗೆ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನವರಿ 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

Share This Article