ಮಠಗಳು ಸಾಮರಸ್ಯ ಬೆಳೆಸುವ ಕೇಂದ್ರವಾಗಲಿ: ಯು.ಟಿ ಖಾದರ್

Public TV
1 Min Read

ಉಡುಪಿ: ಕೃಷ್ಣ ಮಠ (Krishna Mutt) ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ (UT Khader) ಹೇಳಿದರು.

ಉಡುಪಿ (Udupi) ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ನೀಡಿದ್ದ SC ಒಳಮೀಸಲಾತಿಯನ್ನ ಪುನರ್ ಪರಿಶೀಲನೆ ಮಾಡ್ತೀವಿ: ಪರಮೇಶ್ವರ್

ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆ

Share This Article