ಹಲವು ವರ್ಷಗಳ ಕಾಲ ಧಾರಾವಾಹಿಯಾಗಿ ಮೂಡಿ ಬಂದಿರುವ ರಾಮಾಯಣವನ್ನು (Ramayana) ಮತ್ತೆ ಮರುಪ್ರಸಾರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನವರಿ 22 ರಂದು ಬೆಳಗ್ಗೆ 9 ರಿಂದ ಸಂಜೆ 7.30ರವರೆಗೆ ಇಡೀ ದಿನ ಸೋನಿ ಟಿವಿಯಲ್ಲಿ ರಾಮಾಯಣ ಪ್ರಸಾರ ಮಾಡಲಾಗುವುದು ಎಂದು ವಾಹಿನಿ ಹೇಳಿಕೊಂಡಿದೆ.
ಒಂದು ಕಡೆ ರಾಮಾಯಣ ಕಿರುತೆರೆಯಲ್ಲಿ ಮೂಡಿ ಬರುತ್ತಿದ್ದರೆ, ಮತ್ತೊಂದು ಕಡೆ ರಾಮಮಂದಿರ (Ram Mandir) ಉದ್ಘಾಟನಾ ಸಮಾರಂಭವನ್ನು ಬೆಳ್ಳಿ ತೆರೆಯ ಮೇಲೂ ವೀಕ್ಷಿಸಬಹುದಾಗಿದೆ. ಮಲ್ಟಿಪ್ಲಕ್ಸ್ ಗಳಲ್ಲಿ ನೂರು ರೂಪಾಯಿ ಟಿಕೆಟ್ ನೀಡಿ ದೊಡ್ಡ ಪರದೆಯಲ್ಲಿ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಿಷಬ್ ಗೆ ಆಹ್ವಾನ
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನೂ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಅವರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ರಿಷಬ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಅವಕಾಶಕ್ಕಾಗಿ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ರಿಷಬ್ ಶೆಟ್ಟಿ ಜೊತೆ ಕನ್ನಡದ ಇನ್ನೂ ಅನೇಕ ನಟರಿಗೂ ಆಹ್ವಾನ ನೀಡಲಾಗಿದೆ. ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil Kumar) ಅವರಿಗೆ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಉದ್ಘಾಟನೆಗೆ ಕುಟುಂಬ ಸಮೇತ ಬರುವಂತೆ, ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಲಾಗಿದೆ. ಯಶ್ ಅವರಿಗೂ ಬರುವಂತೆ ಆಹ್ವಾನ ನೀಡಲಾಗಿದೆಯಂತೆ. ಕನ್ನಡ ಸಿನಿಮಾ ರಂಗದ ಬೆರಳೆಣಿಕೆಯ ಕಲಾವಿದರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ.