ಅಡ್ಡಿಪಡಿಸುವವರನ್ನು ಯಾರೂ ನೆನಪಿಸಿಕೊಳ್ಳಲ್ಲ: ಅಧಿವೇಶನಕ್ಕೂ ಮುನ್ನ ಸಂಸದರಿಗೆ ಮೋದಿ ಸಲಹೆ

Public TV
1 Min Read

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ (Budget Session) ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿ ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದ್ದಾರೆ.

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಿತ್ತುಕೊಳ್ಳುವ ಅಭ್ಯಾಸವಿರುವ ಸಂಸದರು ತಮ್ಮ ಸಂಸತ್ತಿನ ಸದಸ್ಯರಾಗಿದ್ದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದಿನಿಂದ ಬಜೆಟ್‌ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ

ಸಂಸತ್ತಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಿದವರನ್ನು ಎಲ್ಲರೂ ಸ್ಮರಿಸುತ್ತಾರೆ. ಆದರೆ ಅಡ್ಡಿಪಡಿಸಿದ ಸದಸ್ಯರನ್ನು ನೆನಪಿಸಿಕೊಳ್ಳುವುದಿಲ್ಲ. ಈ ಬಜೆಟ್ ಅಧಿವೇಶನವು ಪಶ್ಚಾತ್ತಾಪ ಮತ್ತು ಸಕಾರಾತ್ಮಕ ಹೆಜ್ಜೆಗುರುತುಗಳನ್ನು ಬಿಡಲು ಒಂದು ಅವಕಾಶವಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ನಾನು ಎಲ್ಲ ಸಂಸದರನ್ನು ಕೋರುತ್ತೇನೆ ಎಂದಿದ್ದಾರೆ.

ದೇಶವು ಪ್ರಗತಿಯ ಹೊಸ ಎತ್ತರಗಳನ್ನು ಮುಟ್ಟುತ್ತಿದೆ. ದೇಶವು ಪ್ರಗತಿಯಲ್ಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ದೇಶವು ಸರ್ವತೋಮುಖ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಅನುಭವಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

ಬಜೆಟ್‌ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದ್ದಾರೆ. ಫೆ.1 ರಂದು (ಗುರುವಾರ) ಮಧ್ಯಂತರ ಬಜೆಟ್‌ ಮಂಡಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಜ್ಜಾಗಿದ್ದಾರೆ. ಫೆ.9 ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ.

ಹೊಸ ಸರ್ಕಾರ ರಚನೆಯಾದ ನಂತರ ಬಿಜೆಪಿ ಸಂಪೂರ್ಣ ಬಜೆಟ್ ಮಂಡಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಸಂಪ್ರದಾಯವನ್ನು ನಾವು ಅನುಸರಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಜಾರ್ಖಂಡ್ ಸಿಎಂ 30 ಗಂಟೆ ಬಳಿಕ ಪತ್ತೆ!

Share This Article