ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ: ಡಿ.ಕೆ.ಸುರೇಶ್‌ಗೆ ಹೆಚ್‌ಡಿಕೆ ತಿರುಗೇಟು

Public TV
2 Min Read

ರಾಮನಗರ: ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದು ಸಂಸದ ಡಿ.ಕೆ.ಸುರೇಶ್ (D.k.Suresh) ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)  ವಾಗ್ದಾಳಿ ನಡೆಸಿದ್ದಾರೆ.

ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ ಕುರಿತು ಬಿಡದಿಯಲ್ಲಿ ಸುದ್ದಿಗಾರೊಂದಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆಯ ದಿನ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೊ ನ್ಯಾಯ ಯಾತ್ರೆ ಮಾಡಿದರು. ಈಗ ವಿಭಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:  ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ ಇದ್ರೆ ಮತ್ತೊಂದೆಡೆ ಮೋದಿ ಇದ್ದಾರೆ: ಈಶ್ವರಪ್ಪ

174 ಕೋಟಿ ರೂ. ದೇಶದ ಮೊದಲನೇ ಬಜೆಟ್. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಫೈನಾನ್ಸ್ ಕಮಿಷನ್‌ಗಳನ್ನ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಅನ್ನೋ ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ. ಯಾವ ರಾಜ್ಯ ಅಭಿವೃದ್ಧಿ ಆಗಿದೆ ಅದನ್ನ ನೋಡಿ ಹಣ ಹಂಚುತ್ತಾರೆ. ಈ ಹಂಚಿಕೆಯನ್ನು ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿದ್ದು. ಮೋದಿ ಬಂದು ಇದನ್ನ ಪ್ರಾರಂಭ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಗ್ಗೆ ಡಿನ್ನರ್ ಮೀಟಿಂಗ್‍ನಲ್ಲಿ ಚರ್ಚೆ: ಪರಮೇಶ್ವರ್

ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂಥವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: 6 ವರ್ಷ ಪ್ರೀತಿ, ಮದುವೆ, ಮಗು ಕೊಟ್ಟು ಕೈಬಿಟ್ಟ- ಮತ್ತೊಂದು ಮದುವೆಯಾದ ಭೂಪ

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನ ಸಂಘರ್ಷದಿಂದ ಪಡೆಯಲು ಸಾಧ್ಯವಿಲ್ಲ. ವಾಸ್ತವವನ್ನ ಅವರಿಗೆ ಮನವರಿಕೆ ಮಾಡಬೇಕು. ಅವರ ಮನವೊಲಿಸಿ ಹಣ ಪಡೆಯಬೇಕು. ಅದನ್ನ ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Share This Article