ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ

Public TV
1 Min Read

ಲಕ್ನೋ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ (Yamuna Expressway) ಕಾರ್-ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನ ದಹನವಾಗಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ (Divider) ಡಿಕ್ಕಿ ಹೊಡೆದ ಕಾರು, ನಂತರ ಅದೇ ಮಾರ್ಗವಾಗಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಆದ್ರೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ (Accident) ಸಂಭವಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಅಗ್ನಿಗೆ ಆಹುತಿಯಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ಇದನ್ನೂ ಓದಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ – ಕಾಂಗ್ರೆಸ್‌ ಮಾಜಿ ಸಚಿವ

ಅಪಘಾತಕ್ಕೀಡಾದ ಬಸ್ ಆಗ್ರಾದಿಂದ ನೋಯ್ಡಾಗೆ ತೆರಳುತ್ತಿತ್ತು. ಇದನ್ನೂ ಓದಿ: ಆಂಧ್ರ ಸಿಎಂ ಜಗನ್‌ ತಮ್ಮ ಚಿಕ್ಕಪ್ಪನನ್ನೇ ಹತ್ಯೆಗೈದಿದ್ದಾರೆ – ಎನ್.ಚಂದ್ರಬಾಬು ನಾಯ್ಡು ಪುತ್ರ ಗಂಭೀರ ಆರೋಪ

Share This Article