BJP- JDS ಸೀಟು ಹಂಚಿಕೆ ಇನ್ನೂ ಆಗಿಲ್ಲ: ಪ್ರಹ್ಲಾದ್ ಜೋಶಿ

Public TV
1 Min Read

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ BJP-JDS ಮೈತ್ರಿಯಲ್ಲಿ ಸೀಟು ಹಂಚಿಕೆ ಇನ್ನೂ ಯಾವುದು ಫೈನಲ್ ಆಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಒಂದು ಹಂತದಲ್ಲಿ ಎರಡೂ ಪಕ್ಷಗಳ ನಾಯಕರ ನಡುವೆ ಚರ್ಚೆ ನಡೆಯುತ್ತಿದೆ. ಆದರೆ ಅದೆಲ್ಲವೂ ಅಪೂರ್ಣ ಆಗಿದೆ. ಫೆ.17, 18ರ ನಂತರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಎಲ್ಲವೂ ಅಂತಿಮವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಮಂಡ್ಯ ಸೇರಿದಂತೆ ಯಾವುದೇ ಕ್ಷೇತ್ರದ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ನಮ್ಮ ರಾಷ್ಟ್ರೀಯ ನಾಯಕರು ರಾಜ್ಯ ಬಿಜೆಪಿ ಘಟಕದ ಜೊತೆ ಚರ್ಚಿಸಲಿದ್ದಾರೆ. ಆನಂತರವೇ ಸೀಟು ಹಂಚಿಕೆ ನಿರ್ಧಾರವಾಗಲಿದೆ. ಈಗಿನದ್ದೆಲ್ಲ ಊಹಾಪೋಹ. ಕ್ರಿಯೆ – ಪ್ರತಿಕ್ರಿಯೆಗಳಸ್ಟೇ ಎಂದು ಸಚಿವ ಜೋಶಿ ಪ್ರತಿಕ್ರಿಯಿಸಿದರು.

ಭರ್ಜರಿ ಗೆಲುವು ಸಾಧಿಸುವೆ: ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ತಯಾರಿ ನಡೆಸಿದ್ದೇನೆ. ನಾನು ಮತ್ತೆ ಭರ್ಜರಿ ಮತಗಳೊಂದಿಗೆ ಗೆಲ್ಲುತ್ತೇನೆ ಎಂದು ಇದೇ ವೇಳೆ ಜೋಶಿಯವರು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷ ಸೇರ್ಪಡೆ ಜಿಲ್ಲಾಧ್ಯಕ್ಷರು ನೋಡಿಕೊಳ್ಳುತ್ತಾರೆ: ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ತುದಿಗಾಲಲ್ಲಿ ಇರುವ ಮುಖಂಡರು ಮತ್ತು ಕಾರ್ಯಕರ್ತರ ಸೇರ್ಪಡೆ ಬಗ್ಗೆ ಪಕ್ಷದ ಜಿಲ್ಲಾಧ್ಯಕ್ಷರು ನೋಡಿಕೊಳ್ಳುತ್ತಾರೆ ಎಂದರು.

Share This Article