Rajyasabha Polls: ಕಾಂಗ್ರೆಸ್‌ನಿಂದ ಕರ್ನಾಟಕದ ಮೂವರಿಗೆ ಟಿಕೆಟ್

Public TV
1 Min Read

ನವದೆಹಲಿ: ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ (Rajyasabha Election) ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಮೂವರಿಗೆ ಟಿಕೆಟ್‌ ನೀಡಲಾಗಿದೆ.

ಅಜಯ್ ಮಾಕನ್, ಡಾ ಸೈಯದ್ ನಾಸೀರ್ ಹುಸೇನ್ ಹಾಗೂ ಜಿಸಿ ಚಂದ್ರಶೇಖರ್ ಅವರಿಗೆ ಕರ್ನಾಟಕದಿಂದ ಪಕ್ಷ ಟಿಕೆಟ್‌ ನೀಡಿದೆ. ಇನ್ನು ಮಧ್ಯಪ್ರದೇಶದಿಂದ ಅಶೋಕ್ ಸಿಂಗ್, ರೇಣುಕಾ ಚೌಧರಿ ಮತ್ತು ತೆಲಂಗಾಣದಿಂದ ಎಂ ಅನಿಲ್ ಕುಮಾರ್ ಯಾದವ್ ಅವರನ್ನು ಕಾಂಗ್ರೆಸ್ (Congress) ಕಣಕ್ಕಿಳಿಸಿದೆ.

ಪಕ್ಷದ ಹಿರಿಯ ನಾಯಕ ಮತ್ತು ಮಧ್ಯಪ್ರದೇಶದ (Madyapradesh) ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ರಾಜ್ಯಸಭೆಗೆ ಹೋಗಲು ಬಯಸಿದ್ದರು. ಇದೇ ಕಾರಣಕ್ಕೆ ಸೋನಿಯಾ ಗಾಂಧಿಯವರನ್ನು ಕೂಡ ಭೇಟಿಯಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಈ ಪಟ್ಟಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ.

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತಎಣಿಕೆಯೂ ನಡೆಯಲಿದೆ. ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

Share This Article