ಉಮಾಪತಿಗೆ ಠಕ್ಕರ್ ಕೊಡಲು ಮುಂದಾದ ಡಿಬಾಸ್ ಫ್ಯಾನ್ಸ್

Public TV
1 Min Read

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಮತ್ತು ನಿರ್ಮಾಪಕ ಉಮಾಪತಿ ಇಬ್ಬರ ‘ಕಾಟೇರ’ (Kaatera) ಟೈಟಲ್ ಕದನದ ಬೆನ್ನಲ್ಲೇ ರಾಬರ್ಟ್ ನಿರ್ಮಾಪಕನಿಗೆ ಠಕ್ಕರ್ ಕೊಡಲು ಡಿಬಾಸ್ ಫ್ಯಾನ್ಸ್ ಮುಂದಾಗಿದ್ದಾರೆ. ಫೆ.26ರಂದು `ಡಿ ಬಾಸ್ ಜಿಂದಾಬಾದ್’ ಹೆಸರಲ್ಲಿ ದರ್ಶನ್ ಅಭಿಮಾನಿಗಳಿಂದ ಬೃಹತ್ ಬೈಕ್ ರ‍್ಯಾಲಿ ನಡೆಯಲಿದೆ.

ದರ್ಶನ್- ಉಮಾಪತಿ ಸಮರ ನಿಲ್ಲುತ್ತಿಲ್ಲ. ಉಮಾಪತಿಗೆ (Umapathy) ಪಾಠ ಕಲಿಸಲೆಂದೇ ‘ಒಂಟಿ ಸಲಗ’ ಹೆಸರಲ್ಲಿ ಬೃಹತ್ ರ‍್ಯಾಲಿ ನಡೆಸಲು ದರ್ಶನ್ ಫ್ಯಾನ್ಸ್ ತಯಾರಿ ನಡೆಸುತ್ತಿದ್ದಾರೆ. ಡಿಬಾಸ್ ಫ್ಯಾನ್ಸ್ ಟೀಮ್‌ಗೆ ಒಂಟಿ ಸಲಗ ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ:ಬಾಲಿವುಡ್ ನಿರ್ಮಾಪಕ ಕುಮಾರ್ ಶಹಾನಿ ನಿಧನ

ರ‍್ಯಾಲಿ ಮಾಡ್ತಿರೋ ಜಾಗವೇ ಗಮನಾರ್ಹವಾಗಿದ್ದು, ಬೊಮ್ಮನಹಳ್ಳಿಯಲ್ಲಿ ಬೃಹತ್ ರ‍್ಯಾಲಿಯಲ್ಲಿ ದರ್ಶನ್ ಸಾವಿರಾರು ಅಭಿಮಾನಿಗಳು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಬೊಮ್ಮನಹಳ್ಳಿ ಮಹಾ ಗಣಪತಿ ದೇವಸ್ಥಾನದಿಂದ ಹೆಚ್‌ಎಸ್‌ಆರ್ ಲೇಔಟ್ ಬಿಡಿಎ ಕಾಂಪ್ಲೆಕ್ಸ್‌ವರೆಗೆ ರ‍್ಯಾಲಿ ನಡೆಯಲಿದೆ. ಉಮಾಪತಿಗೆ ಠಕ್ಕರ್ ಕೊಡಲು ಅವರದ್ದೇ ಕ್ಷೇತ್ರದಲ್ಲಿ ಫೆ.26ರಂದು ಸಂಜೆ 6 ಗಂಟೆಗೆ ಡಿಬಾಸ್ ಫ್ಯಾನ್ಸ್ ರ‍್ಯಾಲಿ ಮಾಡಲಿದ್ದಾರೆ.

ಇತ್ತೀಚೆಗೆ ಉಮಾಪತಿ ಅವರು ದರ್ಶನ್ ನಟನೆಯ ‘ಕಾಟೇರ’ ಸಿನಿಮಾಗೆ ಟೈಟಲ್ ಕೊಟ್ಟಿದ್ದೇ ನಾನು ಎಂದು ಸಂದರ್ಶನಗಳಲ್ಲಿ ಮಾತನಾಡಿದ್ದರು. ಈ ವಿಚಾರಕ್ಕೆ ಕಾಟೇರ ಸಕ್ಸಸ್ ಮೀಟ್‌ನಲ್ಲಿ ದರ್ಶನ್ ಪ್ರತಿಕ್ರಿಯೆ ನೀಡಿದ್ದರು. ಹೇ ತಗಡು ಚಿತ್ರಕ್ಕೆ ‘ಕಾಟೇರ’ ಎಂದು ಟೈಟಲ್ ಇಟ್ಟಿದ್ದೇ ನಾನು ಎಂದು ದರ್ಶನ್ ಉಮಾಪತಿಗೆ ತಿರುಗೇಟು ನೀಡಿದ್ದರು.

Share This Article