ಹಾಲಿ 100 ಬಿಜೆಪಿ ಸಂಸದರಿಗೆ ಸಿಗಲ್ಲ ಟಿಕೆಟ್‌

Public TV
1 Min Read

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಹಾಲಿ ಕನಿಷ್ಠ 100 ಸಂಸದರಿಗೆ ಬಿಜೆಪಿ (BJP) ಟಿಕೆಟ್‌ ನೀಡದೇ ಇರಲು ನಿರ್ಧರಿಸಿದೆ ಎನ್ನಲಾಗಿದೆ.

ಗುರುವಾರ ರಾತ್ರಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ (ಸಿಇಸಿ) ನಡೆಯಿತು.

 

ಈ ಸಭೆಯಲ್ಲಿ 5 ವರ್ಷದ ಅವಧಿಯಲ್ಲಿ ಸಾಧನೆ ಮಾಡದೇ ಇರುವ ಸಂಸದರಿಗೆ ಮತ್ತೆ ಟಿಕೆಟ್‌ ನೀಡದೇ ಇರುವ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರ ಬಿಡುಗಡೆ – ಆಯ್ಕೆಗೆ ಮೋದಿ, ಅಮಿತ್‌ ಶಾ ತಂತ್ರವೇನು?

ಅಭ್ಯರ್ಥಿಗಳ ಆಯ್ಕೆಗೆ ತಾಂತ್ರಿಕ ವಿಧಾನ ಅಳವಡಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ತಳಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಲು ಪಕ್ಷವು ವಿಶಿಷ್ಟ ವಿಧಾನ ಅಳವಡಿಸಿಕೊಂಡಿದೆ. ನಮೋ ಆ್ಯಪ್ ಮೂಲಕ ಪ್ರಸ್ತುತ ಸಂಸದರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.  ಇದನ್ನೂ ಓದಿ: ಜಾತಿಗಣತಿ ವರದಿಯನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು: ಒಕ್ಕಲಿಗರ ಸಮಿತಿ ಎಚ್ಚರಿಕೆ

ಗುರುವಾರ ರಾತ್ರಿ ನಡೆದ ಸಭೆ ನಸುಕಿನ ಜಾವ 3 ಗಂಟೆಯವರೆಗೆ ನಡೆದಿತ್ತು. ಸಭೆಯ ಬಳಿಕ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದ್ದು, ಮೊದಲ 100 ಮಂದಿ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಪ್ರಕಟವಾಗುವ ಸಾಧ್ಯತೆಯಿದೆ.

 

Share This Article