ಕಡಬದಲ್ಲಿ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

Public TV
1 Min Read

– ಕೇರಳ ಮೂಲದ ಆರೋಪಿ ಬಂಧನ

ಮಂಗಳೂರು: ಕಿರಾತಕನೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬದಲ್ಲಿ (Kadaba) ನಡೆದಿದೆ.

ಕೇರಳ (Kerala) ಮೂಲದ ಅಬೀನ್ ಎಂಬಾತ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿ.ಬಿ, ಅರ್ಚನಾ ಹಾಗೂ ಅಮೃತ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಕಡಬ ಸರ್ಕಾರಿ ಶಾಲೆಯಲ್ಲಿ ಘಟನೆ ನಡದಿದ್ದು, ಆರೋಪಿ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿಕೊಂಡು ಬಂದು ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿ ಕೇರಳ ಮೂಲದವನು ಎಂಬುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ.

ಆ್ಯಸಿಡ್ ದಾಳಿಗೊಳಗಾದ ಮೂವರು ವಿದ್ಯಾರ್ಥಿನಿಯರಿಗೆ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲು ಸಿದ್ಧತೆ ನಡೆಸಲಾಗಿದೆ. ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಆ್ಯಸಿಡ್ ದಾಳಿ ನಡೆಸಿದ್ದು, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ದಾಳಿ ನಡೆಸಿದ ಅಬೀನ್ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಅಲ್ಲಿದ್ದ ವಿದ್ಯಾರ್ಥಿಗಳು ಆತನನ್ನು ಹಿಡಿದಿದ್ದಾರೆ. ವಿಷಯ ತಿಳಿದು ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Share This Article