ಮೂವರನ್ನು ಯಾಕೆ ಅರೆಸ್ಟ್ ಮಾಡಿದ್ದಾರೆ ಗೊತ್ತಿಲ್ಲ: ಪ್ರಿಯಾಂಕ್‌ ಖರ್ಗೆ

Public TV
1 Min Read

ಬೆಂಗಳೂರು: ಮೂವರನ್ನು ಪೊಲೀಸರು ಯಾಕೆ ಬಂಧನ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಪೊಲೀಸರು ಇಂದು ಮೂವರನ್ನು ಬಂಧನ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮದವರು ಪ್ರಿಯಾಂಕ್‌ ಖರ್ಗೆಯವರನ್ನು ಕೇಳಿದಾಗ, ಇವಾಗಲೂ FSL ರಿಪೋರ್ಟ್ ನಲ್ಲಿ‌ ಏನು ಬಂದಿದೆಯೋ ಗೊತ್ತಿಲ್ಲ. ಗೃಹ ಸಚಿವರು ಬಂದ ಮೇಲೆ‌ ಗೊತ್ತಾಗುತ್ತೆ. ವಿಚಾರಣೆ ಆಗಲಿ ಯಾಕೆ ಆತಂಕ ಎಂದಿದ್ದಾರೆ.

ಮಾಧ್ಯಮಗಳ ಮೇಲೆ ಎಫ್ ಐಆರ್ ಹಾಕಲಿ ಅಂತ ಯಾರು ಹೇಳಿದ್ದಾರೆ. ಎಫ್ ಎಸ್ ಎಲ್ ರಿಪೋರ್ಟ್ ನಲ್ಲೂ ಕೂಗಿ‌ದ್ದಾರೆ ಅಂತ ಇದೆಯಾ..?, ಖಾಸಗಿ ರಿಪೋರ್ಟ್ ನ ಅಧಿಕೃತ ಅಂತ ನಾನು ಬಹಿರಂಗ ಪಡಿಸಿದ್ನಾ?. ಸರ್ಕಾರದ ಎಫ್ ಎಸ್ ಎಲ್ ವರದಿಯನ್ನು ನಾನು ನೋಡಿಲ್ಲ. ನಾಳೆ ಸರ್ಕಾರದ ಎಫ್ ಎಸ್ ಎಲ್ ರಿಪೋರ್ಟ್ ಬರಲಿ ಎಂದು ತಿಳಿಸಿದ್ದಾರೆ.

ಮೂರು ಜನರನ್ನು ಯಾಕೆ ಆರೆಸ್ಟ್ ಮಾಡಿದ್ದಾರೆ ಗೊತ್ತಿಲ್ಲ. ಎಫ್ ಎಸ್ ಎಲ್ ಬಂದಿದೆಯಾ ವಾಯ್ಸ್ ಮ್ಯಾಚ್ ಆಗಿದೆಯಾ ಗೊತ್ತಿಲ್ಲ. ಸರ್ಕಾರದ ವರದಿಯೇ ಅಂತಿಮ. ಇವಾಗ್ಲೆ ಕಂಕ್ಲೂಶನ್ ಗೆ ಬರೋದು ಬೇಡ. ಅವರನ್ನ ಕರೆದುಕೊಂಡು ಹೋಗಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲದೆ ನಾನು ಮಾತನಾಡಲ್ಲ. ಹಕ್ಕು ಚ್ಯುತಿ ಮಂಡನೆ ಬಗ್ಗೆ ಮಾತನಾಡಿದ್ದು ನನಗೆ ಗೊತ್ತಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

ಡಿಸಿಪಿ ಸ್ಪಷ್ಟನೆ: ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿ’ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈSಐ ವರದಿ, ಸಾಂದರ್ಭಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿರುತ್ತದೆ ಎಂದು ಈ ಸಂಬಂಧ ಸೆಂಟ್ರಲ್ ಡಿಸಿಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Share This Article