Don 3: ರಣ್‌ವೀರ್ ಜೊತೆ ರೊಮ್ಯಾನ್ಸ್ ಮಾಡಲು ದುಬಾರಿ ಸಂಭಾವನೆ ಬೇಡಿಕೆಯಿಟ್ಟ ಕಿಯಾರಾ

Public TV
1 Min Read

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿಗೆ (Kiara Advani) ಮದುವೆಯಾದ್ಮೇಲೂ ಬಾಲಿವುಡ್‌ನಲ್ಲಿ ಭಾರೀ ಬೇಡಿಕೆಯಿದೆ. ಮದುವೆಯ ಬಳಿಕ ಮತ್ತಷ್ಟು ಹಾಟ್ ಆಗಿ ನಟಿ ಕಾಣಿಸಿಕೊಳ್ತಿದ್ದಾರೆ. ಇದೀಗ ‘ಡಾನ್ 3’ (Don 3) ಚಿತ್ರದಲ್ಲಿ ರಣ್‌ವೀರ್ ಸಿಂಗ್ (Ranveer Singh) ಜೊತೆ ನಟಿಸಲು 50%ರಷ್ಟು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ನಟಿಯ ಸಂಭಾವನೆ ಕೇಳಿ ಬಾಲಿವುಡ್ ಮಂದಿ ದಂಗಾಗಿದ್ದಾರೆ.

Kiara Advani

ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಚಿತ್ರದಲ್ಲಿ ರಣ್‌ವೀರ್ ಸಿಂಗ್ ಹೀರೋ ಆಗಿ ನಟಿಸಲಿದ್ದಾರೆ. ಅವರಿಗೆ ಕಿಯಾರಾ ಅಡ್ವಾಣಿ ಹೀರೋಯಿನ್ ಆಗಿ ನಟಿಸುವ ಚಾನ್ಸ್ ಸಿಕ್ಕಿದೆ. ಈ ಸಿನಿಮಾದಲ್ಲಿ ನಟಿಸಲು ಕಿಯಾರಾ, 13 ಕೋಟಿ ರೂ. ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾದಲ್ಲಿ ಒರಟ ಪ್ರಶಾಂತ್

Kiara Advani

ಕಿಯಾರಾ ನಟಿಸಿದ ಎಂ.ಎಸ್ ಧೋನಿ, ಶೇರ್ಷಾ, ಕಬೀರ್ ಸಿಂಗ್, ಭೂಲ್ ಭುಲಯ್ಯ 2, ಚಿತ್ರಗಳು ಸೂಪರ್ ಹಿಟ್ ಆಗಿದೆ. ಈ ಹಿಂದೆ 4ರಿಂದ 5 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದ ನಟಿ ಈಗ ಡಾನ್ ಪಾರ್ಟ್ 3ಗೆ 13 ಕೋಟಿ ರೂ. ಡಿಮ್ಯಾಂಡ್ ಮಾಡಿ ಸಂಭಾವನೆ ಕೇಳಿದ್ದಾರೆ ಎನ್ನಲಾಗುತ್ತಿದೆ. ಆ ಪಾತ್ರಕ್ಕೆ ಕಿಯಾರಾನೇ ಸೂಕ್ತ ಎಂದು ನಟಿಯ ಬೇಡಿಕೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರಂತೆ ಚಿತ್ರತಂಡ.

‘ಡಾನ್ 3’ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಹೆಚ್ಚಾಗಿರಲಿದೆ. ಚಿತ್ರದ ಆ್ಯಕ್ಷನ್ ದೃಶ್ಯಗಳಿಗಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಎಂದೂ ನಟಿಸಿರದ ಪಾತ್ರದಲ್ಲಿ ಕಿಯಾರಾ ನಟಿಸುತ್ತಿದ್ದಾರೆ. ರಣ್‌ವೀರ್ ಸಿಂಗ್- ಕಿಯಾರಾ ರೊಮ್ಯಾನ್ಸ್ ನೋಡಲು ಫ್ಯಾನ್ಸ್ ಎದುರು ನೋಡ್ತಿದ್ದಾರೆ.

Share This Article