‘ಬಿಗ್ ಬಾಸ್’ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ

Public TV
1 Min Read

‘ಬಿಗ್ ಬಾಸ್’ ಖ್ಯಾತಿಯ (Bigg Boss Kannada 10) ತುಕಾಲಿ ಸಂತೋಷ್ (Tukali Santhosh) ಅವರ ಕಾರು ಅಪಘಾತವಾಗಿದೆ. ತುಮಕೂರಿನಲ್ಲಿ ತುಕಾಲಿ ಸಂತೋಷ್‌ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಸದ್ಯ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಅವರು ಪತ್ನಿ ಮಾನಸಾ ಜೊತೆ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಕುಣಿಗಲ್‌ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಸದ್ಯ ದೂರು ಪ್ರತಿದೂರು ದಾಖಲಿಸಲು ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಆಟೋ ಡ್ರೈವರ್ ಕಾರ್‌ಗೆ ಡಿಕ್ಕಿ ಹೊಡೆದಿದ್ದಾರೆ ಅಂತಾ ತುಕಾಲಿ ಸಂತು ಕೂಡ ಆರೋಪಿಸುತ್ತಿದ್ದಾರೆ. ಈ ಬಗ್ಗೆ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಂದಹಾಗೆ, ತುಕಾಲಿ ಸಂತೋಷ್ ಅವರು ಇತ್ತೀಚೆಗೆ ಹೊಸ ಕಾರನ್ನು ಖರೀದಿಸಿದ್ದರು. ಬಿಗ್ ಬಾಸ್ ಶೋನಿಂದ ಬಂದ ಹಣದಲ್ಲಿ ದುಬಾರಿ ಕಾರು ಖರೀದಿ ಮಾಡಿದ್ದರು.

Share This Article