ಬಿಎಸ್‌ವೈ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಿಐಡಿಗೆ ವರ್ಗಾವಣೆ

By
1 Min Read

ಬೆಂಗಳೂರು: 17 ವಯಸ್ಸಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (B.S.Yediyurappa) ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ (DGP) ಕಚೇರಿಯು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಆದೇಶಿಸಿದೆ. ಇದನ್ನೂ ಓದಿ: ನನ್ನ ವಿರುದ್ಧದ ಆರೋಪ ನಿರಾಧಾರ: ಬಿಎಸ್‌ ಯಡಿಯೂರಪ್ಪ

ಏನಿದು ಪ್ರಕರಣ?
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಬಾಲಕಿ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೊ ಕೇಸ್‌

Share This Article