ಸೋನು ಗೌಡಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ: ಕೋರ್ಟ್ ಆದೇಶ

Public TV
1 Min Read

ಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿ ಆದೇಶ ನೀಡಿದೆ ಬೆಂಗಳೂರಿನ ಸಿಜೆಎಂ ಕೋರ್ಟ್. ಮಗು ಪೋಷಕರನ್ನು ರಾಯಚೂರಿಗೆ ಕರ್ಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ಕಸ್ಟಡಿ ಗೆ ಕೇಳಿದ್ದರು ಬ್ಯಾಡರಹಳ್ಳಿ ಪೊಲೀಸರು. ಸದ್ಯ ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೋನುವನ್ನು ಪೊಲೀಸರು ಕಳುಹಿಸಲಿದ್ದಾರೆ.

ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿತ್ತು.

ಈ ಹಿಂದೆಯಷ್ಟೇ ಸೋನು ಶ್ರೀನಿವಾಸ್ ಗೌಡ ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್  ಆಗಿದ್ದರು. ಸ್ವತಃ ಸೋನು ಗೌಡ ಅವರೇ ಆ ಮಗುವನ್ನು ಇಟ್ಟುಕೊಂಡು ವಿಡಿಯೋ ಕೂಡ ಮಾಡಿದ್ದರು. ಈ ಮಗುವಿನ ಪರಿಚಯವನ್ನು ಸೋನು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದರು.

ದತ್ತು ಪಡೆಯುವ ಯಾವುದೇ ನಿಯಮವನ್ನು ದತ್ತು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ. ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪ ಕೂಡ ಇದೆ.

 

ಮಗುವನ್ನ ದತ್ತು ಪಡೆದ ಮೇಲೆ ಸುಳ್ಳು  ಪ್ರಚಾರ ಗಿಟ್ಟಿಸಿಕೊಳ್ಳಲು ಸೋನು ತಂತ್ರ ರೂಪಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸ್ರಿಂದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿತ್ತು.

Share This Article