ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ

Public TV
1 Min Read

ಬೆಂಗಳೂರು: ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ (Janardhan Reddy) ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ (Bengaluru BJP Office) ನಡೆದ ಕೆಆರ್‌ಪಿಪಿ (KRPP) ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

Share This Article