ಕಾರ್ಗೋ ಹಡಗು ಡಿಕ್ಕಿ – ಮುರಿದು ಬಿತ್ತು ಅಮೆರಿಕದ ಪ್ರಸಿದ್ಧ ಸೇತುವೆ

Public TV
1 Min Read

ವಾಷಿಂಗ್ಟನ್‌: ಕಾರ್ಗೋ ಹಡಗೊಂದು (Cargo Ship) ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಮುರಿದು ಬಿದ್ದ ಘಟನೆ ಅಮೆರಿಕದ ಬಾಲ್ಟಿಮೋರ್‌ನಲ್ಲಿ (USA Baltimore) ನಡೆದಿದೆ.

ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಅಗ್ನಿಶಾಮಕ ದಳ, ಪೊಲೀಸರು ಈಗ ರಕ್ಷಣೆಯಲ್ಲಿ ತೊಡಗಿದ್ದಾರೆ. ನೀರಿಗೆ ಬಿದ್ದ ಕಾರಿನಲ್ಲಿದ್ದ  ಹಲವು ಮಂದಿ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಪಾಕಿಸ್ತಾನದ 2ನೇ ಅತಿ ದೊಡ್ಡ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ

ಸಿಂಗಾಪುರ ಮೂಲದ ಸರಕು ಸಾಗಾಣೆ ಹಡಗು ಗುದ್ದಿದ್ದು, 20ಕ್ಕೂ ಹೆಚ್ಚು ಕಾರುಗಳು ನೀರಿಗೆ ಬಿದ್ದಿವೆ ಎಂದು ವರದಿಯಾಗಿದೆ. ತಾಂತ್ರಿಕ ವೈಫಲ್ಯದಿಂದ ಘಟನೆ ನಡೆದಿದ್ಯಾ ಅಥವಾ ಉಗ್ರರ ಕೃತ್ಯ ಇರಬಹುದೇ ಈ ಕೋನದಲ್ಲಿ ಈಗ ಅಮೆರಿಕ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ

ಟಾಪ್ಸ್ಕೋ ನದಿಗೆ ಒಟ್ಟು 2.6 ಕಿ.ಮೀ ಉದ್ದದ ಸೇತುವೆಯನ್ನು ಕಟ್ಟಲಾಗಿದೆ. 1977 ರಲ್ಲಿ ಸೇತುವೆ ಉದ್ಘಾಟನೆಯಾಗಿದ್ದು ವಾರ್ಷಿಕ 1.1 ಕೋಟಿಗೂ ಅಧಿಕ ವಾಹನಗಳು ಸಂಚರಿಸುತ್ತಿವೆ. ಬಾಲ್ಟಿಮೋರ್‌ ಅಮೆರಿಕ ಪ್ರಮುಖ ಕೈಗಾರಿಕಾ ನಗರವಾಗಿದ್ದು ಈ ಸೇತುವೆಯನ್ನು ಒಳಗೊಂಡ ರಸ್ತೆ ಮಾರ್ಗ ಅಮೆರಿಕ ರಾಜಧಾನಿ ವಾಷಿಂಗ್ಟನ್‌ ಸಂಪರ್ಕಿಸುತ್ತದೆ.

 

Share This Article