ಯಶ್ ಸಹೋದರಿಯಾಗಿ ಕರೀನಾ ನಟನೆ: ಟಾಕ್ಸಿಕ್ ಹೊಸ ವಿಷಯ

Public TV
1 Min Read

ಶ್ ನಟನೆಯ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ನಟಿಸ್ತಾರಾ? ಇಂಥದ್ದೊಂದು ಪ್ರಶ್ನೆ ಹಲವು ತಿಂಗಳ ಹಿಂದೆಯೇ ಶುರುವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಈ ಚಿತ್ರದಲ್ಲಿ ಕರೀನಾ ನಟಿಸುತ್ತಿದ್ದಾರಂತೆ. ಅದೂ ಯಶ್ ಅವರ ಸಹೋರಿಯ ಪಾತ್ರ ಎಂದು ಹೇಳಲಾಗುತ್ತಿದೆ.

ಈ ಹಿಂದೆಯೇ ಸಂದರ್ಶನವೊಂದರಲ್ಲಿ ಕರೀನಾ ಅವರು, ಯಶ್ ಜೊತೆ ಮಾತ್ರ ನಟಿಸುತ್ತೇನೆ. ಪ್ರಭಾಸ್, ಅಲ್ಲು ನಕೋ ಬಾಬಾ ಎಂದಿದ್ದರು. ಯಶ್ ಜೊತೆ ನಟಿಸೋದು ಹೆವ್ವಿ ಇಷ್ಟ. ಅದೇ ಲೈಫ್ ಟೈಮ್ ಅಚೀವ್‌ಮೆಂಟು ಎಂದಿದ್ದರು. ಈ ಮೂಲಕ ತಾವು ಯಶ್ ಜೊತೆ ನಟಿಸುವ ಉತ್ಸಾಹವನ್ನೂ ತೋರಿಸಿದ್ದರು. ಆ ಕನಸು ನನಸಾದಂತೆ ಕಾಣುತ್ತಿದೆ.

ಈ ನಡುವೆ ಯಶ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಇದೆ. ಟಾಕ್ಸಿಕ್ (Toxic) ಸಿನಿಮಾವನ್ನು ಗೀತು ಮೋಹನ್ ದಾಸ್ (Geethu Mohan Das) ನಿರ್ದೇಶನ ಮಾಡಲಿದ್ದಾರೆ ಎನ್ನುವ ವಿಷಯ ಬಿಟ್ಟರೆ, ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದ ಒಂದೇ ಒಂದು ಫೋಟೋ ಕೂಡ ಆಚೆ ಬಂದಿರಲಿಲ್ಲ. ಇದೇ ಮೊದಲ ಬಾರಿಗೆ ಯಶ್ ಮತ್ತು ಗೀತು ಅವರ ಫೋಟೋ ಸಿಕ್ಕಿದೆ. ಗೋವಾದಲ್ಲಿ ಸಿನಿಮಾದ ಶೂಟಿಂಗ್ ನಡೆದಿದ್ದು, ಆ ಫೋಟೋ ಅದು ಎನ್ನಲಾಗುತ್ತಿದೆ.

 

ಟೆಂಪಲ್ ರನ್ ಮುಗಿಸಿಕೊಂಡು ಸದ್ಯ ಯಶ್ (Yash) ಗೋವಾದಲ್ಲಿ (Goa) ಬೀಡು ಬಿಟ್ಟಿದ್ದಾರೆ. ಗೋವಾದ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಸದ್ಯ ಅವರು ಗೋವಾನಲ್ಲಿ ಬೀಡು ಬಿಟ್ಟಿರೋದು ಟಾಕ್ಸಿಕ್ ಸಿನಿಮಾದ ಶೂಟಿಂಗ್ ಗಾಗಿ ಎನ್ನುವ ವಿಚಾರ ಹರಿದಾಡುತ್ತಿತ್ತು. ಅದು ಈಗ ನಿಜವಾಗಿದೆ. ಶೂಟಿಂಗ್ ಸಮಯದ್ದು ಎನ್ನಲಾದ ಫೋಟೋ ವೈರಲ್ ಆಗಿದೆ.

Share This Article