ನಟ ವಿಜಯ ರಾಘವೇಂದ್ರ ಪತ್ನಿ ಕುಟುಂಬಕ್ಕೆ ಮತ್ತೊಂದು ಆಘಾತ

Public TV
1 Min Read

ನ್ನಡದ ಹೆಸರಾಂತ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸ್ಪಂದನಾ ನಿಧನದ ಬಳಿಕ  ಕುಟುಂಬದಲ್ಲಿ ಮತ್ತೊಂದು ಸಾವು ಆಗಿದ್ದು, ಸ್ಪಂದನಾ ಅವರ ಮಾವ ಹೇರಾಜೆ ಶೇಖರ ಬಂಗೇರ (Heraje Shekhara Bangera) ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾರೆ.

ದಿ.ಸ್ಪಂದನಾ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ತಾಯಿಯ ಅಣ್ಣ ಶೇಖರ ಬಂಗೇರ, ದ.ಕ ಜಿಲ್ಲೆಯ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ರಾತ್ರಿ ನಡೆದ ಘಟನೆ ನಿಧನರಾಗಿದ್ದಾರೆ. ಸಂತೆಕಟ್ಟೆಯಲ್ಲಿ ಫುಡ್ ಪಾರ್ಸೆಲ್ ಹಿಡಿದು ರಸ್ತೆ ದಾಟುವಾಗ ದುರಂತ ಸಂಭವಿಸಿದೆ.

 

ಯುವತಿಯೋರ್ವಳು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ, ಶೇಖರ್ ಅವರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆ ತಲುಪುವ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದಾರೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೂ ಗಂಭೀರ ಗಾಯವಾಗಿದೆ.

Share This Article