ಇಸ್ತಾಂಬುಲ್ ನೈಟ್‍ಕ್ಲಬ್‍ನಲ್ಲಿ ಅಗ್ನಿ ದುರಂತ – 29 ಮಂದಿ ದುರ್ಮರಣ

Public TV
1 Min Read

ಇಸ್ತಾಂಬುಲ್: ಇಲ್ಲಿನ 16 ಅಂತಸ್ತಿನ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Istanbul Fire Accident) ಕನಿಷ್ಠ 29 ಜನ ಸಾವನ್ನಪ್ಪಿದ್ದಾರೆ ಎಂದು ಎಂದು ವರದಿಯಾಗಿದೆ.

ಆರಂಭದಲ್ಲಿ 10 ಜನ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದರು. ಇದೀಗ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಓರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಲ್ಲಿನ ಗವರ್ನರ್ ದಾವುತ್ ಗುಲ್ ತಿಳಿಸಿದ್ದಾರೆ.

ಬೆಂಕಿಯು ಮಧ್ಯಾಹ್ನ 12:47ಕ್ಕೆ ಕಾಣಿಸಿಕೊಂಡಿದೆ. ಭಾರೀ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸಪಟ್ಟಿದೆ. ನೈಟ್‍ಕ್ಲಬ್‍ನ್ನು ಹೊಂದಿದ್ದ ಅಂಡರ್‌ಗ್ರೌಂಡ್ (ನೆಲಮಾಳಿಗೆ) ಮೊದಲ ಮತ್ತು 2ನೇ ಮಹಡಿ ನಿರ್ಮಾಣ ಕಾರ್ಯದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಇಸ್ತಾನ್‍ಬುಲ್‍ನ ಮೇಯರ್ ಎಕ್ರೆಮ್ ಇಮಾಮೊಗ್ಲು, ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

Share This Article