ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

Public TV
1 Min Read

ವಿಜಯಪುರ: ಆಟವಾಡಲು ಹೋಗಿದ್ದ 2 ವರ್ಷದ ಮಗುವೊಂದು ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.

ಸಾತ್ವಿಕ್ ಮುಜಗೊಂಡ (2) ಕೊಳವೆ ಬಾವಿಗೆ ಬಿದ್ದ ಮಗು. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಚಾಣ ಗ್ರಾಮದಲ್ಲಿ ಘಟನೆ ನಡೆದಿದೆ. ಮಗು ಆಟವಾಡಲು ಹೋಗಿದ್ದ ವೇಳೆ ಹೀಗಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಕೋಟಿ ಕೋಟಿ ಆಸ್ತಿ ಒಡತಿ ಶೋಭಾ ಕರಂದ್ಲಾಜೆ ಬಳಿಯಿದೆ 1 ಕೆಜಿ ಚಿನ್ನದ ಬಿಸ್ಕೆಟ್‌ – ಆಸ್ತಿ ಎಷ್ಟಿದೆ ಗೊತ್ತಾ?

ಮಗುವಿನ ತಂದೆ ಸತೀಶ ಮುಜಗೊಂಡ, ತಾಯಿ ಪೂಜಾ ಮುಜಗೊಂಡ. ಸತೀಶ ಅವರ 4 ಎಕರೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಯಲಾಗಿತ್ತು. ಆದರೆ ಕೊಳವೆ ಬಾವಿ ಮುಚ್ಚಿರುವ ಕೆಲಸ ಮಾಡಿರಲಿಲ್ಲ. ಮಗು ಆಟವಾಡಲು ಹೋಗಿದ್ದಾಗ ಕೊಳವೆ ಬಾವಿಗೆ ಬಿದ್ದಿದೆ.

ಕಬ್ಬು, ಲಿಂಬೆಗೆ ನೀರಿಲ್ಲ ಎಂದು ಬೋರ್‌ ಹೊಡೆಸಲಾಗಿತ್ತು. 400 ಅಡಿ ವರೆಗೂ ಬಾವಿ ಕೊರೆಸಲಾಗಿದೆ ಎನ್ನಲಾಗಿದೆ.‌ ಮಗುವಿನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಹೈಕೋರ್ಟ್‌ನಲ್ಲಿ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

Share This Article