ದುನಿಯಾ ವಿಜಯ್ ಚಿತ್ರಕ್ಕೆ ರಚಿತಾ ರಾಮ್ ನಾಯಕಿ

Public TV
1 Min Read

ದ್ಯ ಸಂಜು ವೆಡ್ಸ್ ಗೀತಾ 2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಚಿತಾ ರಾಮ್ (Rachita Ram), ಮತ್ತೊಂದು ಸಿನಿಮಾ ಒಪ್ಪಿಕೊಂಡಿರುವ ಸುದ್ದಿ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಕಾಟೇರ ಕಥೆಗಾರ ಜಡೇಶ್ ಹಂಪಿ ನಿರ್ದೇಶನದ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ದುನಿಯಾ ವಿಜಯ್ (Duniya Vijay) ಅವರಿಗಾಗಿ ಜಡೇಶ್ (Jadesh Hampi) ಸಿನಿಮಾ ಮಾಡುವ ವಿಚಾರ ಹಂಚಿಕೊಂಡಿದ್ದಾರೆ. ವಿಜಯ್ ಅವರ 29ನೇ ಸಿನಿಮಾ ಅನೌನ್ಸ್ ಕೂಡ ಮಾಡಿದ್ದರು. ಇದೇ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಹಂಚಿಕೊಳ್ಳಬೇಕಷ್ಟೆ.

ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಈ ಸಿನಿಮಾ ಮೂಲಕ ದುನಿಯಾ ವಿಜಯ್ ಅವರ ಪುತ್ರಿ ಮೋನಿಕಾ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಇದ್ಯಾವುದೂ ಅಧಿಕೃತವಲ್ಲ. ವಿಜಯ್ ಭೀಮ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋದ್ರಿಂದ ಮುಂದಿನ ದಿನಗಳಲ್ಲಿ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಬಹುದು.

 

ರಚಿತಾ ರಾಮ್ ಮತ್ತು ದುನಿಯಾ ವಿಜಯ್ ನಟನೆಯ ಜಾನಿ  ಸಿನಿಮಾ ಪ್ರೇಕ್ಷಕರನ್ನು ರಂಜಿಸಿತ್ತು. ಹಾಗಾಗಿ ಮತ್ತೆ ಈ ಜೋಡಿಯನ್ನು ತೆರೆಯ ಮೇಲೆ ನೋಡುವುದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

Share This Article