ಚುನಾವಣಾ ಪ್ರಚಾರದಲ್ಲಿದ್ದ ಖಳನಟ ಅರುಳ್ ಮಣಿ ಹೃದಯಾಘಾತದಿಂದ ನಿಧನ

Public TV
1 Min Read

ಕಾಲಿವುಡ್ ನ ಹೆಸರಾಂತ ಖಳನಟ, ರಾಜಕಾರಣಿ ಅರುಳ್ ಮಣಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿರಂತರವಾಗಿ ಚುನಾವಣೆ ಪ್ರಚಾರದಲ್ಲಿದ್ದ 65ರ ವಯಸ್ಸಿನ ಅರುಳ್ ಮಣಿ ತೀವ್ರ ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗುತ್ತಿದೆ.

ಎಐಎಡಿಎಂಕೆ ಪರ ಪ್ರಚಾರ ಮಾಡುತ್ತಿದ್ದ ಅರುಳ್ ಮಣಿ, ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ಸೇರುವ ಮುನ್ನವೇ ಅವರು ಹೃದಯಾಘಾತದಿಂದ ನಿಧನರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಲಿಂಗಾ, ಸಿಂಗಂ 2 ಸೇರಿದಂತೆ ಅನೇಕ ಚಿತ್ರಗಳಲ್ಲಿ ವಿಲನ್ ಆಗಿ ಗುರುತಿಸಿಕೊಂಡಿದ್ದ ಇವರು, ಸಕ್ರಿಯರಾಜಕಾರಣದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಈ ಸಲ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪರ ಪ್ರಚಾರದಲ್ಲೂ ಪಾಲ್ಗೊಂಡಿದ್ದರು. ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ.

Share This Article