ಬಾಯ್ ಫ್ರೆಂಡ್ ಜೊತೆ ಗೋವಾಗೆ ಹಾರಿದ ಬಿಗ್ ಬಾಸ್ ಸ್ಪರ್ಧಿ ಪವಿ

Public TV
2 Min Read

ಮಾಡೆಲಿಂಗ್ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ, ಬಿಗ್ ಬಾಸ್ ಸ್ಪರ್ಧಿಯೂ ಆಗಿದ್ದ ಪವಿ ಪೂವಪ್ಪ ಮೊನ್ನೆಯಷ್ಟೇ ಆರು ತಿಂಗಳ ನಂತರ ಬಾಯ್ ಫ್ರೆಂಡ್ ಮೀಟ್ ಮಾಡಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಾಯ್ ಫ್ರೆಂಡ್ (Boyfriend) ಡಿಜೆ ಮ್ಯಾಡಿ (Maddy) ಅನ್ನು ಸ್ವತಃ ಪವಿ ಅವರೇ ಸ್ವಾಗತಿಸಿ, ಕಾರಿನಲ್ಲಿ ಕರೆದೊಯ್ದಿದ್ದಾರೆ. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆರು ತಿಂಗಳ ಮಟ್ಟಿಗೆ ಮ್ಯಾಡಿ ವಿದೇಶದಲ್ಲಿ ಕೆಲಸಕ್ಕೆ ಹೋಗಿದ್ದರು. ಈ ವಿಷಯವನ್ನು ಪವಿ ಬಿಗ್ ಬಾಸ್ ಮನೆಯಲ್ಲಿ ಹಂಚಿಕೊಂಡಿದ್ದರು. ಹಲವು ವರ್ಷಗಳಿಂದ ಒಟ್ಟಿಗೆ ಇರುವ ವಿಚಾರವನ್ನೂ ಅವರು ಹೇಳಿಕೊಂಡಿದ್ದರು. ಆರು ತಿಂಗಳು ಕಳೆದ ನಂತರ ಮ್ಯಾಡಿ ಮತ್ತೆ ಬೆಂಗಳೂರಿಗೆ ಬಂದಿದ್ದಾರೆ. ಪವಿ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

ಬೆಂಗಳೂರಿಗೆ ಬಾಯ್ ಫ್ರೆಂಡ್ ಬರುತ್ತಿದ್ದಂತೆಯೇ ಆತನೊಂದಿಗೆ ಗೋವಾಗೆ (Goa) ಹಾರಿದ್ದಾರೆ. ಗೋವಾದ ಕಡಲ ಕಿನಾರೆಯಲ್ಲಿ ಬಿಕಿನಿ (Bikini) ಹಾಕಿಕೊಂಡು ಪವಿ ಪೋಸ್ ಕೊಟ್ಟಿದ್ದಾರೆ. ಜೊತೆಗೆ ಬಾಯ್ ಫ್ರೆಂಡ್ ಜೊತೆ ಪಬ್ ನಲ್ಲಿ ಎಂಜಾಯ್ ಮಾಡ್ತಿರೋ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂದಿ ಮೂಲಕ ಪವಿ ಪೂವಪ್ಪ (Pavi Poovappa) ಬಂದಾಗ, ಅವರು ಹೆಸರು ಕೇಳುತ್ತಿದ್ದಂತೆಯೇ ಅನೇಕ ನೆಟ್ಟಿಗರು ಆ ಹೆಸರಿಗಾಗಿ ಹುಡುಕಾಡಿದ್ದರು. ಹುಡುಕಿದವರಿಗೆಲ್ಲ ಸಿಕ್ಕಿದ್ದು, ರಾಶಿ ರಾಶಿ ಹಾಟ್ ಫೋಟೋಗಳು. ಬಿಕಿನಿ ಶೂಟ್ ಗಳು. ಹೌದು, ಪವಿ ಪೂವಪ್ಪ ಹತ್ತು ವರ್ಷಗಳಿಂದ ಮಾಡೆಲಿಂಗ್ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಾವಿರಾರು ಶೋಗಳಿಗೆ ಹೆಜ್ಜೆ ಹಾಕಿದ್ದಾರೆ.

ಸಾಕಷ್ಟು ಜಾಹೀರಾತುಗಳಿಗೆ ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಜೊತೆಗೆ ತಮ್ಮದೇ ಆದ ಅಭಿಮಾನಿ ಬಳಗವನ್ನೂ ಅವರು ಹೊಂದಿದ್ದಾರೆ. ಪವಿ ಪೂವಪ್ಪ ಮೂಲತಃ ಕೊಡಗಿನವರು. ಹುಟ್ಟಿದ್ದು ಕೂರ್ಗನಲ್ಲಿಯಾದರೂ, ಬೆಳೆದದ್ದು ಮಾತ್ರ ಬೆಂಗಳೂರಿನಲ್ಲಿ. ಇವರ ಪೂರ್ಣ ಹೆಸರು ಪಾನಿಕುಟ್ಟೀರ ಪವಿತ್ರಾ ಪೂವಪ್ಪ. ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ನಂತರ ಪವಿ ಪೂವಪ್ಪ ಆಗಿ ಬದಲಾಗಿದ್ದಾರೆ.

 

ಕಾಲೇಜು ದಿನಗಳಿಂದಲೇ ಮಾಡೆಲಿಂಗ್ ಕ್ಷೇತ್ರದತ್ತ ಮುಖ ಮಾಡಿದ ಇವರು, ಮಿಸ್ ಕರ್ನಾಟಕ ಬೆಸ್ಟ್ ಬಾಡಿ ಟೈಟಲ್ ಕೂಡ ಪಡೆದುಕೊಂಡಿದ್ದಾರೆ. ಅನೇಕ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದಾರೆ. ಅನೇಕ ಪ್ರಶಸ್ತಿ ಗೌರವಗಳನ್ನೂ ಪಡೆದುಕೊಂಡಿದ್ದಾರೆ.

Share This Article