ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ಭಾರತ ಬಂದರು ನಿರ್ಬಂಧ

Public TV
1 Min Read

ನವದೆಹಲಿ: ಮಾಲ್ಡೀವ್ಸ್‌ಗೆ (Maldives) ಅಗತ್ಯ ವಸ್ತುಗಳ ರಫ್ತಿಗೆ ಭಾರತವು (India) ಬಂದರು ನಿರ್ಬಂಧ ವಿಧಿಸಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯದ (DGFT) ಅಧಿಸೂಚನೆ ತಿಳಿಸಿದೆ.

ನಾಲ್ಕು ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕ ಮಾತ್ರ ದ್ವೀಪ ರಾಷ್ಟ್ರಕ್ಕೆ ಅಗತ್ಯ ವಸ್ತುಗಳ ರಫ್ತಿಗೆ ಅನುಮತಿ ನೀಡಲಾಗುತ್ತದೆ. ಮುಂಡ್ರಾ ಸೀ ಪೋರ್ಟ್, ಟ್ಯುಟಿಕೋರಿನ್ ಸೀ ಪೋರ್ಟ್, ನ್ಹವಾ ಶೇವಾ ಸೀ ಪೋರ್ಟ್ ಮತ್ತು ಐಸಿಡಿ ತುಘಲಕಾಬಾದ್ ಸ್ಟೇಷನ್‌ಗಳು ಎಂದು ಡಿಜಿಎಫ್‌ಟಿ ಅಧಿಸೂಚನೆಯಲ್ಲಿ ಮಾಹಿತಿ ನೀಡಿದೆ. ಇದನ್ನೂ ಓದಿ: UPSC ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ್‌ಗೆ ಮೊದಲ ರ‍್ಯಾಂಕ್‌

ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ಮಾಲ್ಡೀವ್ಸ್‌ ಸರ್ಕಾರದ ಕೋರಿಕೆಯ ಮೇರೆಗೆ ಭಾರತವು ವಿಶಿಷ್ಟ ದ್ವಿಪಕ್ಷೀಯ ಕಾರ್ಯವಿಧಾನದ ಅಡಿಯಲ್ಲಿ 2024-25 ಕ್ಕೆ ನಿರ್ದಿಷ್ಟ ಪ್ರಮಾಣದ ಅಗತ್ಯ ಸರಕುಗಳನ್ನು ರಫ್ತು ಮಾಡಲು ಅನುಮತಿಸಿತು.

ಭಾರತ ಮತ್ತು ಮಾಲ್ಡೀವ್ಸ್ 1981 ರಲ್ಲಿ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದವು. ಇದು ಅಗತ್ಯ ಸರಕುಗಳ ರಫ್ತಿಗೆ ಸಂಬಂಧಿಸಿದ್ದಾಗಿದೆ. ಮಾಲ್ಡೀವ್ಸ್‌ನಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ನಿರ್ಮಾಣ ಉದ್ಯಮಕ್ಕೆ ನಿರ್ಣಾಯಕ ವಸ್ತುಗಳಾದ ನದಿ ಮರಳು ಮತ್ತು ಜಲ್ಲಿಕಲ್ಲು ರಫ್ತನ್ನು 25% ನಿಂದ 1,000,000 ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಸೀಮಾ ಹೈದರ್‌ಗೆ ಕಾನೂನು ಸಂಕಷ್ಟ; ನೋಯ್ಡಾ ಕೋರ್ಟ್‌ನಿಂದ ಸಮನ್ಸ್‌ ಜಾರಿ

ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಸಕ್ಕರೆ, ಅಕ್ಕಿ, ಗೋಧಿ ಹಿಟ್ಟು ಮತ್ತು ಬೇಳೆಕಾಳುಗಳ ರಫ್ತು ಶೇ.5 ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ಭಾರತದಿಂದ ಈ ವಸ್ತುಗಳ ರಫ್ತಿನ ಮೇಲೆ ವಿಶ್ವಾದ್ಯಂತ ನಿಷೇಧದ ಹೊರತಾಗಿಯೂ ಭಾರತವು ಮಾಲ್ಡೀವ್ಸ್‌ಗೆ ಅಕ್ಕಿ, ಸಕ್ಕರೆ ಮತ್ತು ಈರುಳ್ಳಿ ರಫ್ತು ಮಾಡುವುದನ್ನು ಮುಂದುವರೆಸಿದೆ.

Share This Article