ನೇಹಾ ಹತ್ಯೆಗೆ ಭುಗಿಲೆದ್ದ ಆಕ್ರೋಶ- ಪಾತಕಿ ಎನ್‍ಕೌಂಟರ್‌ಗೆ ಹಿಂದೂಪರ ಸಂಘಟನೆಗಳ ಆಗ್ರಹ

By
1 Min Read

– ರಾಜ್ಯ ಸರ್ಕಾರದ ವಿರುದ್ಧ ಜೋಶಿ, ಟೆಂಗಿನಕಾಯಿ ಕಿಡಿ

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್‍ನಲ್ಲಿಯೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ  (Neha Hiremath) ಹತ್ಯೆಗೆ ಇದೀಗ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ.

ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು, ನೂರಾರು ಕಾರ್ಯಕರ್ತರು ವಿದ್ಯಾನಗರ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ್ದಾರೆ. ಪರಿಣಾಮ ವಿದ್ಯಾನಗರ ಪೆÇಲೀಸ್ ಠಾಣೆ ಎದುರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನೇಹಾ ಕೊಂದವನನ್ನು ಎನ್‍ಕೌಂಟರ್ ಮಾಡಬೇಕೆಂದು ವಿವಿಧ ಹಿಂದೂಪರ ಸಂಘಟನೆಗಳು ಠಾಣೆ ಎದುರು ಆಗ್ರಹಿಸುತ್ತಿವೆ. ಇದನ್ನೂ ಓದಿ: ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು?

ಇನ್ನೊಂದೆಡೆ ನೇಹಾ ಕೊಲೆ ಖಂಡಿಸಿ ಎನ್‍ಎಸ್‍ಯುಐ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಮುಂಭಾಗ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ, ಆಕ್ರೋಶ ಹೊರಹಾಕಿದೆ. ಅಲ್ಲದೇ ಕೊಲೆ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದೆ. ಇದನ್ನೂ ಓದಿ: ನಮ್ಮನೆ ಮಕ್ಕಳು ಸುರಕ್ಷಿತವಾಗಿ ಮನೆಗೆ ಹಿಂದಿರುಗುವ ಗ್ಯಾರಂಟಿ ಯಾವಾಗ ಕೊಡ್ತೀರಿ? – ಸಿಎಂಗೆ ಸಿ.ಟಿ ರವಿ ಪ್ರಶ್ನೆ

ಕಿಮ್ಸ್ ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ, ಬೆಲ್ಲದ್ ಟೆಂಗಿನಕಾಯಿ ಭೇಟಿ ಕೊಟ್ಟು ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣದಿಂದಲೇ ಇಂಥ ಘಟನೆ ನಡೆದಿದೆ. ಸರ್ಕಾರ ತಮ್ಮ ಬೆಂಬಲಕ್ಕಿದೆಯೆಂದು ಇಂತಹ ಘಟನೆ ಮರುಕಳಿಸುತ್ತವೆ. ಹಾಡಹಗಲೇ ಕೊಲೆ ಮಾಡುವ ಮನಸ್ಥಿತಿಗೆ ತಲುಪಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ಅಗಬೇಕು ಎಂದು ಆಗ್ರಹಿಸಿದರು.

Share This Article