ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

Public TV
1 Min Read

ಮುಂಬೈ: ಮಹಾರಾಷ್ಟ್ರದ (Maharashtra) ಯವತ್ಮಾಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ರ‍್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಪ್ರಜ್ಞೆ ತಪ್ಪಿದರು.

ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣದ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಇದನ್ನೂ ಓದಿ: ಸಂಪತ್ತು ಸಮೀಕ್ಷೆಯ ಮೂಲಕ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಬಯಸುತ್ತೇನೆ: ರಾಗಾ

ಗಡ್ಕರಿ ಅವರು ಬಿಜೆಪಿಯ ನಾಗ್ಪುರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸಿದ್ದರು. ಇದನ್ನೂ ಓದಿ: ಸುಪ್ರೀಂ ಚಾಟಿ ಬೆನ್ನಲ್ಲೇ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ ಕೋರಿದ ಪತಂಜಲಿ

ಪ್ರಜ್ಞೆ ತಪ್ಪಿದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಿತಿನ್‌ ಗಡ್ಕರಿ, ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ‍್ಯಾಲಿ ವೇಳೆ ಬಿಸಿಲಿನ ತಾಪದಿಂದ ಅನಾನುಕೂಲವಾಗಿತ್ತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ಹೊರಡುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Share This Article