ಅರುಣಾಚಲ ಪ್ರದೇಶದಲ್ಲಿ ಭೂಕುಸಿತ- ಕೊಚ್ಚಿ ಹೋಯ್ತು ಚೀನಾ ಗಡಿ ಸಂಪರ್ಕಿಸೋ ಹೆದ್ದಾರಿ

Public TV
1 Min Read

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ (Arunachala Pradesh) ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ.

ಹೌದು. ದಿಭಾಂಗ್ ಕಣಿವೆಯು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು (Pema Khandu) ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ರಸ್ತೆಯು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ ಕಾರಣ ಶೀಘ್ರದಲ್ಲಿ ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ

ಮೂರು ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡುತ್ತೇವೆ ಎಂದು ಜಿಲ್ಲಾಡಳಿತವು ದಿಭಾಂಗ್ ಕಣಿವೆಯ ನಿವಾಸಿಗಳಿಗೆ ನೋಟಿಸ್‌ ನೀಡಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರೋಯಿಂಗ್‌ಗೆ ಸಂಪರ್ಕಿಸುವ NH 313 ರ ಪ್ರಮುಖ ಭಾಗವು ಬುಧವಾರದಂದು ಕೊಚ್ಚಿಹೋಗಿದೆ ಎಂದು ದಿಭಾಂಗ್ ಕಣಿವೆಯ ಎಲ್ಲಾ ನಿವಾಸಿಗಳಿಗೆ ತಿಳಿಸಲಾಗಿದೆ. ಇದನ್ನು ಸರಿಪಡಿಸಲು ಕನಿಷ್ಟ ಮೂರು ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ ರಸ್ತೆಯನ್ನು ಪುನಃಸ್ಥಾಪಿಸುವವರೆಗೆ ಮತ್ತು ಮಳೆ ಸಹಜ ಸ್ಥಿತಿಗೆ ಮರಳುವವರೆಗೆ ಸಹಕರಿಸಬೇಕಾಗಿ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Share This Article