ಧರ್ಮದ ಆಧಾರದಲ್ಲಿ ಮತಯಾಚನೆ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌

By
1 Min Read

ಬೆಂಗಳೂರು: ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಎಕ್ಸ್‌ನಲ್ಲಿ ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ (Karnataka Election Commission) ಎಕ್ಸ್‌ನಲ್ಲಿ ತಿಳಿಸಿದೆ.
ಇದನ್ನೂ ಓದಿ: ರಾಮನವಮಿ ಮೆರವಣಿಗೆ ದಿನ ಬಾಂಬ್‌ ಸ್ಫೋಟ – NIA ತನಿಖೆಗೆ ಆದೇಶ

ಏ.25 ರಂದು ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಅಯೋಧ್ಯೆಯ (Ayodhya) ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್‌ ಮಾಡಿ, ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕವನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ. ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದಿದ್ದರು.

 

Share This Article