‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಮುಗಿಸಿದ ಕಿಚ್ಚ ಸುದೀಪ್

Public TV
1 Min Read

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಇದೀಗ ‘ಮ್ಯಾಕ್ಸ್’ (Max Film) ಸಿನಿಮಾದ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ‘ಮ್ಯಾಕ್ಸ್’ ಚಿತ್ರದ ಕೊನೆಯ ದಿನದ ಶೂಟಿಂಗ್ ವಿಡಿಯೋವನ್ನು ಹಂಚಿಕೊಂಡು ಚಿತ್ರತಂಡಕ್ಕೆ ಸುದೀಪ್ ಧನ್ಯವಾದ ತಿಳಿಸಿದ್ದಾರೆ.

ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಅರ್ಜುನ್ ಮಹಾಕ್ಷಯ್ ಪಾತ್ರದಲ್ಲಿ ಸುದೀಪ್ ನಟಿಸಿದ್ದಾರೆ. ಮಹಾಬಲಿಪುರಂನಲ್ಲಿ ಮ್ಯಾಕ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀಪ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಅವಕಾಶ ಸಿಕ್ಕರೆ ಕನ್ನಡದಲ್ಲಿ ನಟಿಸ್ತೇನೆ : ನಟಿ ಚಾಂದನಿ

ಇದು ಸುದೀರ್ಘ 10 ತಿಂಗಳ ಪ್ರಯಾಣವಾಗಿದೆ. ನಾನು ಪ್ರತಿ ಕ್ಷಣ ಎಂಜಾಯ್ ಮಾಡಿದ್ದೇನೆ. ಅದ್ಭುತ ತಂಡ ಮತ್ತು ಕಲಾವಿದರ ಜೊತೆ ಕೆಲಸ ಮಾಡಿರೋದಾಗಿ ತಿಳಿಸಿದ್ದಾರೆ. ನನ್ನ ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು ಧನು ಸರ್ ಎಂದು ಸುದೀಪ್ ಬರೆದುಕೊಂಡಿದ್ದಾರೆ. ನಿರ್ದೇಶಕ ವಿಜಯ್‌ಗೆ ಸುದೀಪ್ ಥ್ಯಾಂಕ್ಯೂ ಎಂದಿದ್ದಾರೆ. ಈ ಮೂಲಕ ‘ಮ್ಯಾಕ್ಸ್’ ಸಿನಿಮಾ ಕಡೆಯ ದಿನ ಶೂಟಿಂಗ್ ವಿಡಿಯೋ ಶೇರ್ ಮಾಡಿದ್ದಾರೆ.

ಅಂದಹಾಗೆ, ಸುದೀಪ್ ಜೊತೆ ವರಲಕ್ಷ್ಮಿ ಶರತ್ ಕುಮಾರ್, ಸಂಯುಕ್ತಾ ಹೊರನಾಡ್, ಸುಕೃತಾ, ಅನಿರುದ್ಧ ಭಟ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಅಂದಹಾಗೆ, ವಿಕ್ರಾಂತ್‌ ರೋಣ ಚಿತ್ರದ ನಂತರ ‘ಮ್ಯಾಕ್ಸ್‌’ ಸಿನಿಮಾದ ಮೂಲಕ ಬರುತ್ತಿರೋ ಸುದೀಪ್‌ ನಟನೆಯ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ.

Share This Article