ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ ನೀಡಲ್ಲ, QR Code ಪಾಸ್‌ ವಿತರಣೆ: ಪರಮೇಶ್ವರ್‌

Public TV
1 Min Read

ಬೆಂಗಳೂರು: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ (Vidhana Soudha Entry) ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಹೇಳಿದ್ದಾರೆ.

ವಿಧಾನಸೌಧ ದ್ವಾರದ ಮೆಟಲ್ ಡಿಟೆಕ್ಟರ್‌, ನೂತನ ಬ್ಯಾಗೇಜ್‌ಸ್ಕ್ಯಾನರ್‌ ಯಂತ್ರಗಳನ್ನು ಪರಮೇಶ್ವರ್‌ ಪರಿಶೀಲಿಸಿದರು. ವಿಧಾನಸೌಧ ಡಿಸಿಪಿ ನೇತೃತ್ವದಲ್ಲಿ ಭದ್ರತಾ ಕ್ರಮಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಪರಮೇಶ್ವರ್ ಪಡೆದರು. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ (QR Code) ಇರುವ ಪಾಸ್‌ಗಳನ್ನು (Pass) ನೀಡಲಾಗುತ್ತದೆ. ವಿಧಾನಸೌಧದಲ್ಲಿ ಯಾರಾದರೂ ಮೆಟಲ್ ಸಾಧನ ತೆಗೆದುಕೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಪತ್ತೆಯಾಗುತ್ತದೆ. ಕಳೆದ 3 ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿತ್ತು. ಈಗ ಸಿಎಂ  ಹಣ ಬಿಡುಗಡೆ ಮಾಡಿದ ಮೇಲೆ ಈ ಬ್ಯಾಗೇಜ್ ಸ್ಕ್ಯಾನರ್ ಖರೀದಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಬುಲೆಟ್‌ ರೈಲು ಎಲ್ಲಿ ಎಂದು ಕೇಳಿದ ಅಂಜಲಿ ನಿಂಬಾಳ್ಕರ್‌

ವಿಧಾನಸೌಧದಲ್ಲಿ ಭದ್ರತೆಯನ್ನು ಇನ್ನೂ ಜಾಸ್ತಿ ಮಾಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್‌ಗಳು ಇರಲಿಲ್ಲ. ಈಗ 2-3 ಕೋಟಿ ರೂ. ಖರ್ಚು ಮಾಡಿ ನಾಲ್ಕು ಗೇಟ್ ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ ಎಂದು ಹೇಳಿದರು.

Share This Article