ಚನ್ನಗಿರಿ ಠಾಣೆಯ ಮೇಲೆ ಕಲ್ಲು ತೂರಾಟ – 11 ಮಂದಿ ವಶಕ್ಕೆ

By
1 Min Read

– ಸಿಸಿಟಿವಿ, ಮೊಬೈಲ್‌ ದೃಶ್ಯ ಆಧಾರಿಸಿ ಪತ್ತೆ
– ಈಗಾಗಲೇ 40ಕ್ಕೂ ಹೆಚ್ಚು ಮಂದಿಯನ್ನು ಗುರುತಿಸಿದ ಪೊಲೀಸರು

ದಾವಣಗೆರೆ: ಚನ್ನಗಿರಿ ಪೊಲೀಸ್‌ ಠಾಣೆಯ (Channagiri Police Station) ಮೇಲೆ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೊಬೈಲ್  ವಿಡಿಯೋ, ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿ ಕಿಡಿಗೇಡಿಗಳನ್ನು ಗುರುತಿಸಲಾಗಿದೆ. ಅದಿಲ್‌ (Adil) ಅಂತ್ಯಸಂಸ್ಕಾರ ಬಳಿಕ ಪೋಲೀಸರು, ಕಿಡಿಗೇಡಿಗಳ ಹೆಡೆಮುರಿ ಕಟ್ಟಲು ಮುಂದಾಗಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಧರ್ಮಸ್ಥಳ ಪ್ರವೇಶಿಸ್ತಿದ್ದಂತೆಯೇ ಜೈ ಶ್ರೀರಾಮ್ ಘೋಷಣೆ ಕೂಗಿದ ಭಕ್ತರು!

ವಿಡಿಯೋ ಪರಿಶೀಲನೆ ವೇಳೆ 40ಕ್ಕೂ ಹೆಚ್ವು ಕಿಡಿಗೇಡಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಪ್ರಮುಖ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕುರಾನ್ ಸತ್ಯವಾಗಿ ನನ್ನ ಗಂಡನಿಗೆ ಯಾವ್ದೇ ರೋಗ ಇರಲಿಲ್ಲ, ಪೊಲೀಸರೇ ಹೊಡೆದು ಕೊಂದಿದ್ದಾರೆ: ಮೃತ ಆದಿಲ್ ಪತ್ನಿ

ಗಲಾಟೆ ಹೇಗಾಯ್ತು?
ಶುಕ್ರವಾರ ರಾತ್ರಿ ಚನ್ನಗಿರಿ ಪೊಲೀಸ್ ಠಾಣೆ ಮುಂಭಾಗ ರಣರಂಗವಾಗಿ ಸೃಷ್ಟಿಯಾಗಿತ್ತು. ಚನ್ನಗಿರಿ ಪಟ್ಟಣದ ಟಿಪ್ಪು ನಗರದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಅದಿಲ್‌ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದರು. ಅದೇ ಸಂದರ್ಭದಲ್ಲಿ ಅದಿಲ್ ಲೋ ಬಿಪಿಯಿಂದ ಕುಸಿದು ಬಿದ್ದಿದ್ದ. ಕೂಡಲೇ ತಾಲೂಕು ಆಸ್ಪತ್ರೆಗೆ ಪೊಲೀಸರು ಆತನನನ್ನು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅದಿಲ್ ಸಾವನ್ನಪ್ಪಿದ್ದ.

 

ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಕ್ರೋಶಗೊಂಡ ಅದಿಲ್ ಕುಟುಂಬಸ್ಥರು ಮೃತದೇಹವನ್ನು ಪೊಲೀಸ್ ಠಾಣೆಯ ಮುಂದಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ನಂತರ ಆದಿಲ್‌ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದಾಗ ಕೆಲ ಕಿಡಿಗೇಡಿಗಳ ಗುಂಪು ಏಕಾಏಕಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿತ್ತು. ಠಾಣೆಯ ಮುಂಭಾಗ ಇರುವ ವಾಹನಗಳು, ಗಿಡ, ಕಿಟಕಿ ಗಾಜುಗಳನ್ನು ಧ್ವಂಸ ಮಾಡಿತ್ತು. ಏಕಾಏಕಿ ನಡೆಸಿದ ಕಲ್ಲು ತೂರಾಟದ ವೇಳೆ 11 ಜನ ಪೊಲೀಸ್ ಸಿಬ್ಬಂದಿಗೆ ಗಾಯಗಾಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Share This Article