ಭವಾನಿ ರೇವಣ್ಣ ಕಾರು ಚಾಲಕನ ಬಂಧನ

Public TV
1 Min Read

ಬೆಂಗಳೂರು: ಮಹಿಳೆ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಕಾರು ಚಾಲಕನನ್ನು ಇದೀಗ ಬಂಧಿಸಲಾಗಿದೆ.

ಇಂದು ಸಂಜೆ ಎಸ್ಐಟಿಯವರು ಅಜಿತ್‌ನನ್ನು ಚಿಕ್ಕಮಗಳೂರಿನಲ್ಲಿ (Chikkamagaluru) ಬಂಧಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್‌ ಕೊಟ್ಟರೂ ಅಜಿತ್‌ ಕ್ಯಾರೇ ಎಂದಿರಲಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡ (SIT) ಪೊಲೀಸರು ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದರು.

ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಅನ್ನೋ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿದ್ದು ಇದೇ ಅಜಿತ್ ಅನ್ನೋ ಮಾಹಿತಿ ಇತ್ತು. ಹೀಗಾಗಿಯೇ ಅಜಿತ್ ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

Share This Article