ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

Public TV
1 Min Read

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ (Bhavani Revanna) ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪವನ್ನು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹೊತ್ತಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಆದರೆ ಭವಾನಿ ಅವರು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಎಸ್‌ಐಟಿ ತಂಡ ಹುಡುಕಾಟ ನಡೆಸುತ್ತಿದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಬಂಧನ ಭೀತಿ

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್‌ ತಾಯಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

Share This Article