ಜೂ.9ರ ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ

Public TV
1 Min Read

ನವದೆಹಲಿ: ಇದೇ ಜೂ.9 ರಂದು ಸಂಜೆ 7:15 ಕ್ಕೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ಮೂಲಕ ತಿಳಿಸಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭ ಕುರಿತು ರಾಷ್ಟ್ರಪತಿ ಭವನ (Rashtrapati Bhavan) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ಇದನ್ನೂ ಓದಿ: ಮೋದಿ ಪ್ರಮಾಣ ವಚನಕ್ಕೆ ಸಕಲ ಸಿದ್ಧತೆ – ರಾಷ್ಟ್ರಪತಿ ಭವನಕ್ಕೆ ಭಾರೀ ಭದ್ರತೆ

ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂ.9 ರಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿ ಬೋಧಿಸಲಿದ್ದಾರೆ ಎಂದು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್‌ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಈ ವೇಳೆ ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಸಹ ಮೋದಿಗೆ ಸಾಥ್‌ ನೀಡಿದ್ದರು. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

Share This Article