ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

Public TV
1 Min Read

ನವದೆಹಲಿ: ಮಾಜಿ ಅಧಿಕಾರಿ ಮತ್ತು ಬಿಜೆಡಿ ನಾಯಕ ವಿ.ಕೆ.ಪಾಂಡಿಯನ್ (VK Pandian) ಸಕ್ರಿಯ ರಾಜಕೀಯದಿಂದ (Politics) ಹಿಂದೆ ಸರಿದಿದ್ದಾರೆ.

ಈಗ ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಇಷ್ಟು ವರ್ಷಗಳ ರಾಜಕೀಯ ಪ್ರಯಾಣದಲ್ಲಿ ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಸೇರಿದಂತೆ ಇಡೀ ಬಿಜು ಪರಿವಾರದ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ರಾಜಕೀಯಕ್ಕೆ ಸೇರುವ ನನ್ನ ಉದ್ದೇಶವು ನವೀನ್ ಬಾಬುಗೆ ಸಹಾಯ ಮಾಡುವುದಾಗಿತ್ತು. ಈಗ ನಾನು ಪ್ರಜ್ಞಾಪೂರ್ವಕವಾಗಿ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಮಾಜಿ ಅಧಿಕಾರಿ ಪಾಂಡಿಯನ್ ವೀಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಬಿಜು ಜನತಾ ದಳ (ಬಿಜೆಡಿ) ಮುಖಭಂಗ ಅನುಭವಿಸಿದ ನಂತರ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಅವರ ಆಪ್ತ ವಿಕೆ ಪಾಂಡಿಯನ್ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ನವೀನ್ ಪಟ್ನಾಯಕ್ ಅವರ ಸಂಭಾವ್ಯ ಉತ್ತರಾಧಿಕಾರಿ ಎಂದೇ ಪಾಂಡಿಯನ್‌ ಅವರನ್ನು ಬಿಂಬಿಸಲಾಗಿತ್ತು. ಇದೀಗ ಚುನಾವಣೆಯಲ್ಲಿ ಬಿಜೆಡಿಯ ಹೀನಾಯ ಸೋಲಿನ ನಂತರ ಪಾಂಡಿಯನ್‌ ತೀವ್ರ ಟೀಕೆಗೆ ಗುರಿಯಾಗಿದ್ದರು.

Share This Article