ಮೈಸೂರು: ಖ್ಯಾತ ಸರೋದ್ ವಾದಕ (Sarod Maestro) ಪಂಡಿತ್ ರಾಜೀವ್ ತಾರಾನಾಥ್ (Rajeev Taranath) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
91 ವಯಸ್ಸಿನ ರಾಜೀವ್ ತಾರಾನಾಥ್ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ
ವಿಶ್ವ ಮನ್ನಣೆ ಗಳಿಸಿರುವ ಸಂಗೀತ ಧ್ರುವತಾರೆ ರಾಜೀವ್ ತಾರಾನಾಥ್. ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದ. ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಸಂಗೀತ ಸೇವೆಗಾಗಿ ಇವರಿಗೆ ಪದ್ಮಶ್ರೀ, ನಾಡೋಜ ಸೇರಿದಂತೆ ಹತ್ತಾರು ಪ್ರಶಸ್ತಿ ಪುರಸ್ಕಾರಗಳು ಸಂದಿವೆ.
ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ರಾಜೀನಾಮೆ ನೀಡ್ತಾರೆ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ತಾರೆ: ಡಿ.ಕೆ.ಸುರೇಶ್